ಬೆಂಗಳೂರು: ಡಿ.ಕೆ.ಶಿವಕುಮಾರ್ ಸಿಎಂ ಆಗುವ ಕುರಿತು ಜೈನಗುರು ಭವಿಷ್ಯವಾಣಿ ನುಡಿದ ವಿಚಾರವಾಗಿ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೀಗ ಇದ್ದರೆ ಯಾರು ಬೇಕಾದರೂ ಸಿಎಂ ಆಗಬಹುದು. ಆದರೆ ಯೋಗ್ಯತೆ ಇದ್ದವರು ಮಾತ್ರ ಒಳ್ಳೆಯ ಸಿಎಂ ಆಗುತ್ತಾರೆ. ಸಿಎಂ ಆಗಲು ಯೋಗ್ಯತೆ ಬೇಕು ಎಂದು ಡಿ.ಕೆ.ಶಿವಕುಮಾರ್‌ಗೆ ಟಾಂಗ್ ಕೊಟ್ಟರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿದ್ದರಾಮಯ್ಯ ಎದುರೇ ಡಿಕೆಶಿ ಸಿಎಂ ಆಗಲಿ ಎಂಬ ಘೋಷಣೆ ಮೊಳಗಿಸುತ್ತಾರೆ. ಸಿದ್ದರಾಮಯ್ಯಗೆ ಇದು ದೊಡ್ಡ ಅವಮಾನ. ಇದಕ್ಕಿಂತ ದೊಡ್ಡ ಅವಮಾನ ಬೇಕಾ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೇವಡಿ ಮಾಡಿದರು.
ಇನ್ನು ಸಂಸದೆ ಪ್ರಿಯಾಂಕಾ ಗಾಂಧಿಯನ್ನು ರಾಣಿ ಚೆನ್ನಮ್ಮಗೆ ಹೋಲಿಸಿದ ವಿಚಾರವಾಗಿ ಮಾತನಾಡಿದ ಅವರು, ಹೊಗಳುವ ಭರದಲ್ಲಿ ಮಾನಸಿಕ ಗುಲಾಮಗಿರಿ ತೋರಿಸಿದ್ದಾರೆ. ಇದು ಭಟ್ಟಂಗಿತನದ ಹೇಳಿಕೆ. ರಾಷ್ಟ್ರೀಯ ವ್ಯಕ್ತಿತ್ವಕ್ಕೂ ಈ ಮೂಲಕ ಅವಮಾನ ಮಾಡಲಾಗಿದೆ. ನಾಡಿನ ಜನತೆಗೆ ಮಲ್ಲಿಕಾರ್ಜುನ ಖರ್ಗೆ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…