ರಾಜ್ಯ

ಬಂಧನದಲ್ಲಿರುವ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ

ಬೆಂಗಳೂರು: ಆತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ ಮುನಿರತ್ನಗೆ ಆರ್‌.ಆರ್‌.ಕ್ಷೇತ್ರದಲ್ಲಿ 2020ರಿಂದ 2022ರವರೆಗೆ ನಡೆದ ಕಾಮಗಾರಿಗಳ ತನಿಖೆಗೆ ಆದೇಶಿಸಿದ್ದರಿಂದ ಮತ್ತೊಂದು ಸಂಕಷ್ಟ ಎದುರಾಗಿದೆ.

ಬೆಂಗಳೂರು ಬೃಹತ್‌ ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಒಳಪಡುವ ಆರ್‌.ಆರ್‌.ಕ್ಷೇತ್ರದಲ್ಲಿ 2020ರ ಸೆಪ್ಟಂಬರ್‌ನಿಂದ 2022ರ ಜುಲೈ.19ರ ಅವಧಿಯಲ್ಲಿ ನಡೆದ ಕಾಮಗಾರಿಗಳಲ್ಲಿ 500 ಕೋಟಿ ರೂ.ಗಳಿಗೂ ಅಧಿಕ ಅವ್ಯವಹಾರ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ನಗರ ಪಾಲಿಕೆ ಕಂದಾಯ ವಿಭಾಗದ ವಿಶೇಷ ಆಯುಕ್ತರ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದೆ.

ಶಾಸಕ ಮುನಿರತ್ನ ಅವಧಿಯಲ್ಲಿ ಕಾಮಗಾರಿ ನಡೆಸದೇ ಬಿಲ್‌ ಮಾಡಿಸಿಕೊಂಡಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಸೆಪ್ಟೆಂಬರ್‌.23ರಂದೇ ತನಿಖೆಗೆ ಆದೇಶ ನೀಡಿದ್ದರು. ಆದರೆ, ಇದೀಗ ನಗರ ಪಾಲಿಕೆಯ ಕಂದಾಯ ವಿಶೇಷ ಮುನೀಶ್‌ ಮೌದ್ಗೀಲ್‌ ನೇತೃತ್ವದಲ್ಲಿ ತನಿಖೆಗೆ ಸಮಿತಿ ರಚಿಸಿದೆ.

ಆಂದೋಲನ ಡೆಸ್ಕ್

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

6 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

6 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

6 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

6 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

6 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

6 hours ago