ಬೆಂಗಳೂರು: ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ.
ಹಿರಿಯ ವಕೀಲ ಅಶೋಕ್ ಹಾರ್ನಳ್ಳಿ ಅವರು ಶಾಸಕ ಮುನಿರತ್ನ ಪರ ವಾದ ಮಂಡನೆ ಮಾಡಿದರು. ವಾದ ವಿವಾದ ಆಲಿಸಿ ವಿಚಾರಣೆ ನಡೆಸಿದ ನ್ಯಾಯಾಲಯ, ಮುನಿರತ್ನಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಪ್ರಕರಣದ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುನಿರತ್ನಗೆ ಮತ್ತೆ ಹಿನ್ನಡೆಯಾಗಿದ್ದು, ನಾಳೆ ನೀಡುವ ತೀರ್ಪನ್ನು ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಲಂಚ ಹಾಗೂ ಜಾತಿ ನಿಂದನೆ ಆರೋಪದ ಅಡಿ ದಾಖಲಾಗಿದ್ದ ಪ್ರಕರಣ ಸಂಬಂಧ ಶಾಸಕ ಮುನಿರತ್ನ ಅವರನ್ನು ಕಳೆದ ಶನಿವಾರ ಪೊಲೀಸರು ಬಂಧಿಸಿದ್ದರು.
ಬಂಧನಕ್ಕೊಳಗಾಗಿದ್ದ ಮುನಿರತ್ನರನ್ನು ಎರಡು ದಿನ ಪೊಲೀಸರ ವಶಕ್ಕೆ ನೀಡಿದ ನ್ಯಾಯಾಲಯ ಆದೇಶ ಹೊರಡಿಸಿತ್ತು.