ರಾಜ್ಯ

ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಗೆ ಮುಂದಿನ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವಂತೆ ಜನಪ್ರತಿನಿಧಿಗಳ ಕೋರ್ಟ್‌ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಮುನಿರತ್ನಗೆ ಅಕ್ಟೋಬರ್‌ 19ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ.

ಸಂತ್ರಸ್ಥ ಮಹಿಳೆಯ ದೂರಿನ ಆಧಾರದ ಮೇಲೆ ಶಾಸಕ ಮುನಿರತ್ನ ಮೇಲೆ ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಎಸ್ಐಟಿ ತನಿಖಾ ಕಸ್ಟಡಿಗೆ ವಹಿಸಿದ್ದು, ಇಂದು ಎಸ್‌ಐಟಿ ಕಸ್ಟಡಿ ಅಂತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಬಳಿಕ ಎಸ್‌ಐಟಿ ಅಧಿಕಾರಿಗಳು ಕಸ್ಟಡಿಗೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಆದರೆ ಇದೀಗ ಕೋರ್ಟ್‌ ಮುಂದಿನ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿಡುವಂತೆ ಆದೇಶ ನೀಡಿದೆ.

ಇದೇ ಸಂದರ್ಭದಲ್ಲಿ ಕೋರ್ಟ್‌ನಲ್ಲಿ ಮುನಿರತ್ನ ಪರ ವಕೀಲರು ಮನೆ ಊಟಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಕೋರ್ಟ್‌ ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಮಾಡಲು ಸೂಚಿಸಿದ್ದು, ಒಂದು ವೇಳೆ ಜೈಲು ಅಧಿಕಾರಿಗಳು ಒಪ್ಪದೇ ಇದ್ದ ಸನ್ನಿವೇಶದಲ್ಲಿ ನ್ಯಾಯಾಲಯಕ್ಕೆ ಅರ್ಜಿ ಹಾಕುವಂತೆ ಸಲಹೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

5 hours ago

ಓದುಗರ ಪತ್ರ: ವಿಚ್ಛೇದನಗಳೂ ದುಬಾರಿಯಾಗಿವೇ!

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…

5 hours ago

ಓದುಗರ ಪತ್ರ: 3 ಕೋಟಿ ರೂ. ವೆಚ್ಚದ ಬಸ್ ನಿಲ್ದಾಣ ಜನರಿಗೋ, ಖಾಸಗಿ ವಾಹನಗಳಿಗೋ?

ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…

5 hours ago

ಬಹುತ್ವ ಭಾರತ ನೀತಿಗೆ ಮೋಹನ್ ಭಾಗವತ್ ಬದ್ಧರೇ?

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…

5 hours ago

ವಿಶ್ವದಾಖಲೆಗೆ ಕಾಯುತ್ತಿರುವ ಅರಿವೆಯ ಮೇಲಿನ ಮದರಂಗಿ ಚಿತ್ತಾರ

ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…

6 hours ago

ಅಧ್ಯಾತ್ಮದ ಅಮಲಿನಲ್ಲಿ ದಾರಿ ತಪ್ಪಿದ ತರುಣ ತರುಣಿಯರು

ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…

6 hours ago