Mysore
22
broken clouds
Light
Dark

ಇಂದು ಮುನಿರತ್ನ ಜಾಮೀನು ಅರ್ಜಿ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅರ್ಜಿ ವಿಚಾರಣೆ ಪೂರೈಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಹೊರಡಿಸಲಿದೆ.

ಈ ಕುರಿತ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರು ನಿನ್ನೆ ವಿಚಾರಣೆ ನಡೆಸಿದ್ದರು.

ವಿಚಾರಣೆ ವೇಳೆ ಪ್ರಾಸಿಕ್ಯೂಷನ್‌ ಪರ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಸಿ.ಎಸ್.ಪ್ರದೀಪ್‌ ಕುಮಾರ್‌ ಆರೋಪಿಯ ಜಾಮೀನು ಅರ್ಜಿಗೆ ಸುದೀರ್ಘ ಆಕ್ಷೇಪಣೆ ಸಲ್ಲಿಸಿದರು.

ನಿನ್ನೆ ಶಾಸಕ ಮುನಿರತ್ನ ಪರ ಹೈಕೋರ್ಟ್‌ ಹಿರಿಯ ವಕೀಲ ಅಶೋಕ ಹಾರನಹಳ್ಳಿ ವಾದ ಮಂಡಿಸಿದ್ದರು.

ಈ ಹಿನ್ನೆಲೆಯಲ್ಲಿಂದು ಜಾಮೀನು ಅರ್ಜಿ ತೀರ್ಪು ಪ್ರಕಟವಾಗಲಿದ್ದು, ಶಾಸಕ ಮುನಿರತ್ನಗೆ ಜಾಮೀನು ಮಂಜೂರಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.