ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅರ್ಜಿ ವಿಚಾರಣೆ ಪೂರೈಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಹೊರಡಿಸಲಿದೆ.
ಈ ಕುರಿತ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ನಿನ್ನೆ ವಿಚಾರಣೆ ನಡೆಸಿದ್ದರು.
ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಸಿ.ಎಸ್.ಪ್ರದೀಪ್ ಕುಮಾರ್ ಆರೋಪಿಯ ಜಾಮೀನು ಅರ್ಜಿಗೆ ಸುದೀರ್ಘ ಆಕ್ಷೇಪಣೆ ಸಲ್ಲಿಸಿದರು.
ನಿನ್ನೆ ಶಾಸಕ ಮುನಿರತ್ನ ಪರ ಹೈಕೋರ್ಟ್ ಹಿರಿಯ ವಕೀಲ ಅಶೋಕ ಹಾರನಹಳ್ಳಿ ವಾದ ಮಂಡಿಸಿದ್ದರು.
ಈ ಹಿನ್ನೆಲೆಯಲ್ಲಿಂದು ಜಾಮೀನು ಅರ್ಜಿ ತೀರ್ಪು ಪ್ರಕಟವಾಗಲಿದ್ದು, ಶಾಸಕ ಮುನಿರತ್ನಗೆ ಜಾಮೀನು ಮಂಜೂರಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…