Mysore
20
broken clouds

Social Media

ಶುಕ್ರವಾರ, 14 ನವೆಂಬರ್ 2025
Light
Dark

ಶೋಕಾಸ್‌ ನೋಟಿಸ್‌ ಬಗ್ಗೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಿಷ್ಟು

ಬೆಂಗಳೂರು: ಬಿಜೆಪಿ ನಾಯಕರು ಹಾಗೂ ಬಿಜೆಪಿ ಪಕ್ಷದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುತ್ತಾ ಬಂಡಾಯವೆದ್ದಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಬಿಜೆಪಿ ಹೈಕಮಾಂಡ್‌ ಶೋಕಾಸ್‌ ನೋಟಿಸ್‌ ನೀಡಿ ಬಿಗ್‌ ಶಾಕ್‌ ನೀಡಿದೆ.

ರಾಜಕೀಯ ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ಎಲ್ಲಾ ವಿಷಯಗಳ ಬಗ್ಗೆ ಪಕ್ಷದ ಅಧಿಕೃತ ನಿಲುವಿಗೆ ವಿರುದ್ಧವಾಗಿ ಸಾರ್ವಜನಿಕವಾಗಿ ನೀವು ಹೇಳಿಕೆಗಳನ್ನು ನೀಡುತ್ತಿರುವುದು ಮತ್ತು ನಿಲುವುಗಳನ್ನು ವ್ಯಕ್ತಪಡಿಸುತ್ತಿರುವುದು ಮಾಧ್ಯಮಗಳಲ್ಲಿ ಹಾಗೂ ವಿವಿಧ ವೇದಿಕೆಗಳಲ್ಲಿ ವರದಿಯಾಗಿದೆ.

ಈ ಹಿಂದೆಯ ನಿಮಗೆ ಹಲವು ಬಾರಿ ನೋಟಿಸ್‌ ನೀಡಲಾಗಿದೆ. ಆಗ ನೀವು ಸದ್ವರ್ತನೆಯ ಭರವಸೆ ನೀಡಿದ್ದರೂ ಅಶಿಸ್ತಿನ ಕೃತ್ಯಗಳು ನಿಮ್ಮಿಂದ ಹೆಚ್ಚಾಗುತ್ತಿವೆ. ಇದು ಪಕ್ಷದ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಶೋಕಾಸ್‌ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ನೋಟಿಸ್‌ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್‌ಗೆ ಉತ್ತರ ಕೊಡುತ್ತೇನೆ. ಕರ್ನಾಟಕದಲ್ಲಿ ಬಿಜೆಪಿಯ ಪ್ರಸ್ತುತ ಸ್ಥಿತಿಯ ಬಗ್ಗೆ ವಾಸ್ತವಾಂಶಗಳನ್ನು ತಿಳಿಸುತ್ತೇವೆ. ಹಿಂದುತ್ವದ ಹೋರಾಟ, ಭ್ರಷ್ಟಾಚಾರದ ವಿರೋಧ, ವಕ್ಫ್‌ ಸಂಬಂಧಿತ ಸಮಸ್ಯೆಗಳು ಮತ್ತು ವಂಶವಾಯಿ ರಾಜಕೀಯ ಸಂಬಂಧ ನನ್ನ ಬದ್ಧತೆ ಅಚಲವಾಗಿ ಉಳಿಯುತ್ತದೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

 

Tags:
error: Content is protected !!