ಬೆಂಗಳೂರು: ಬಿಜೆಪಿ ನಾಯಕರು ಹಾಗೂ ಬಿಜೆಪಿ ಪಕ್ಷದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುತ್ತಾ ಬಂಡಾಯವೆದ್ದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ನೀಡಿ ಬಿಗ್ ಶಾಕ್ ನೀಡಿದೆ.
ರಾಜಕೀಯ ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ಎಲ್ಲಾ ವಿಷಯಗಳ ಬಗ್ಗೆ ಪಕ್ಷದ ಅಧಿಕೃತ ನಿಲುವಿಗೆ ವಿರುದ್ಧವಾಗಿ ಸಾರ್ವಜನಿಕವಾಗಿ ನೀವು ಹೇಳಿಕೆಗಳನ್ನು ನೀಡುತ್ತಿರುವುದು ಮತ್ತು ನಿಲುವುಗಳನ್ನು ವ್ಯಕ್ತಪಡಿಸುತ್ತಿರುವುದು ಮಾಧ್ಯಮಗಳಲ್ಲಿ ಹಾಗೂ ವಿವಿಧ ವೇದಿಕೆಗಳಲ್ಲಿ ವರದಿಯಾಗಿದೆ.
ಈ ಹಿಂದೆಯ ನಿಮಗೆ ಹಲವು ಬಾರಿ ನೋಟಿಸ್ ನೀಡಲಾಗಿದೆ. ಆಗ ನೀವು ಸದ್ವರ್ತನೆಯ ಭರವಸೆ ನೀಡಿದ್ದರೂ ಅಶಿಸ್ತಿನ ಕೃತ್ಯಗಳು ನಿಮ್ಮಿಂದ ಹೆಚ್ಚಾಗುತ್ತಿವೆ. ಇದು ಪಕ್ಷದ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಶೋಕಾಸ್ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.
ಈ ನೋಟಿಸ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್‌ಗೆ ಉತ್ತರ ಕೊಡುತ್ತೇನೆ. ಕರ್ನಾಟಕದಲ್ಲಿ ಬಿಜೆಪಿಯ ಪ್ರಸ್ತುತ ಸ್ಥಿತಿಯ ಬಗ್ಗೆ ವಾಸ್ತವಾಂಶಗಳನ್ನು ತಿಳಿಸುತ್ತೇವೆ. ಹಿಂದುತ್ವದ ಹೋರಾಟ, ಭ್ರಷ್ಟಾಚಾರದ ವಿರೋಧ, ವಕ್ಫ್ ಸಂಬಂಧಿತ ಸಮಸ್ಯೆಗಳು ಮತ್ತು ವಂಶವಾಯಿ ರಾಜಕೀಯ ಸಂಬಂಧ ನನ್ನ ಬದ್ಧತೆ ಅಚಲವಾಗಿ ಉಳಿಯುತ್ತದೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…