ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಜಾತಿ ನಿಂದನೆ, ಬೆದರಿಕೆ ಹಾಗೂ ಆತ್ಯಾಚಾರ ಪ್ರಕರಣದಲ್ಲಿ ಮತ್ತೊಮ್ಮೆ ಪೊಲೀಸರ ವಶವಾಗಿದ್ದು, ಅವರಿಗೆ ಸಂಬಂಧಿಸಿದ ಅಕ್ರಮಗಳು ಒಂದಾದ ಮೇಲೊಂದು ಬಯಲಾಗುತ್ತಿವೆ ಎಂಬ ಅಂಶ ಹೊರಬಿದ್ದಿದೆ. ಇದೀಗ ಶಾಸಕ ಮುನಿರತ್ನ ವಿರುದ್ದ ಏಡ್ಸ್ ಹಬ್ಬಿಸುವ ಆರೋಪ ಒಂದು ಕೇಳಿ ಬಂದಿದೆ.
ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ಅವರು, ಬಿಜೆಪಿ ನಾಯಕರಿಗೆ ಹೂ ಗುಚ್ಛ ನೀಡುವ ವೇಳೆ ಎಚ್‌ಐವಿ ಇಂಜೆಕ್ಟ್ ಮಾಡಲು ಯೋಜನೆ ಹಾಕಿಕೊಂಡಿದ್ದರು ಎಂಬ ಆಘಾತಕಾರಿ ಸುದ್ದಿಯೊಂದು ಕೇಳಿಬಂದಿದೆ. ಎಚ್‌ಐವಿಅನ್ನು ನಾಯಕರಿಗೆ ʼಎಡ್ಸ್ ರಕ್ತʼದ ಮೂಲಕ ಹಬ್ಬಿಸಲು ಪ್ರಯತ್ನಿಸಿದ್ದರು ಎಂಬ ಆರೋಪ ಬಂದಿದೆ.
ಈ ಕುರಿತು ರಾಜ್ಯ ಕಾಂಗ್ರೆಸ್ ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ಬಿಜೆಪಿ ಶಾಸಕರೆಲ್ಲರೂ ಎಚ್‌ಐವಿ ಪರೀಕ್ಷೆ ಮಾಡಿಸಿಕೊಂಡು ಏಡ್ಸ್ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ವ್ಯಂಗ್ಯ ಮಾಡಿದೆ.
ಮುನಿರತ್ನರ ದ್ವೇಷದ ರಾಜಕೀಯಕ್ಕೆ, ಭ್ರಷ್ಟಾಚಾರಕ್ಕೆ ಗುರಿಯಾದವರಲ್ಲಿ ಬಿಜೆಪಿ ನಾಯಕರೂ ಹೊರತಾಗಿಲ್ಲ. ಮಾಧ್ಯಮ ವರದಿಗಳ ಪ್ರಕಾರ ಸ್ವತಃ ಬಿಜೆಪಿ ನಾಯಕ ಅಶೋಕ್ ಅವರಿಗೆ ಏಡ್ಸ್ ಸೋಂಕು ತಗುಲಿಸಲು ಪ್ರಯತ್ನಿಸಿದ್ದ ಆಘಾತಕಾರಿ ಸಂಗತಿ ಹೊರಬಂದಿದೆ. ಇಂತಹ ವಿಕೃತರತರನ್ನು ತಲೆ ಮೇಲೆ ಹೊತ್ತು ಮೆರೆಸುವ ಬಿಜೆಪಿ ಪಕ್ಷದ ನಾಯಕರು ಎಚ್‌ಐವಿ ಪರೀಕ್ಷೆ ಮಾಡಿಸಿಕೊಂಡು ಏಡ್ಸ್ ನಿಯಂತ್ರಣದ ಅಭಿಯಾನಕ್ಕೆ ಹಕರಿಸಬೇಕು ಎಂದು ಕಾಂಗ್ರೆಸ್ ವ್ಯಂಗ್ಯವಾಗಿ ಟ್ವೀಟ್ ಮಾಡಿದೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…