ರಾಜ್ಯ

ಒಂದು ಗಂಟೆ ಸಿಐಡಿ ವಿಚಾರಣೆ ಎದುರಿಸಿದ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ

ಬೆಂಗಳೂರು: ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಅವರಿಂದು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿ ಒಂದು ಗಂಟೆಗಳ ಕಾಲ ವಿಚಾರಣೆ ಎದುರಿಸಿ ಅಂದು ನಡೆದ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬಗ್ಗೆ ಅಸಂವಿಧಾನಿಕ ಪದ ಬಳಕೆ ಮಾಡಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿಗೆ ಸಿಐಡಿ ಪೊಲೀಸರು ನೋಟಿಸ್‌ ನೀಡಿದ್ದರು.

ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಸದನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬಗ್ಗೆ ʼಪ್ರಾಸ್ಟಿಟ್ಯೂಡ್‌ʼ ಪದ ಬಳಕೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

ಈ ಸಂಬಂಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರಿಂದ ಬೆಳಗಾವಿ ಪೊಲೀಸರು ಸಿ.ಟಿ.ರವಿ ಅವರನ್ನು ಬಂಧಿಸಿ ರಾತ್ರಿಯಿಡಿ ಸುತ್ತಾಡಿಸಿದ ಬಗ್ಗೆ ಚರ್ಚೆಯಾಗಿತ್ತು. ನಂತರ ಸಿ.ಟಿ.ರವಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಇದಾದ ಬಳಿಕ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ಈಗ ವಿಚಾರಣೆಗೆ ಸಿಐಡಿ ಪೊಲೀಸರು ನೋಟಿಸ್‌ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆಗ ಹಾಜರಾಗಿದ್ದ ಸಿ.ಟಿ.ರವಿ ಅವರು, ಘಟನೆಯ ವೇಳೆ ಯಾರೆಲ್ಲಾ ಇದ್ದರು ಎಂಬುದರ ಬಗ್ಗೆ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿ.ಟಿ.ರವಿ ಅವರು, ನನ್ನ ಮೇಲೆ ಸುವರ್ಣಸೌಧದಲ್ಲಿ ಹಲ್ಲೆಗೆ ಯತ್ನ ನಡೆದಿತ್ತು. ಅದರ ಬಗ್ಗೆ ವಿಚಾರಣೆ ಇತ್ತು. ಹಲ್ಲೆ ನಡೆದಿರುವ ಬಗ್ಗೆ ಸಿಸಿ ಕ್ಯಾಮರಾದಲ್ಲೂ ದಾಖಲೆಗಳಿವೆ. ಕ್ಯಾಮರಾ ಫೂಟೇಜ್‌ ನೀಡಿದರೆ ಗುರುತಿಸುವುದಾಗಿ ಹೇಳಿದ್ದೇನೆ ಎಂದು ಮಾಹಿತಿ ನೀಡಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

28 mins ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

1 hour ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

2 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

2 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

2 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

3 hours ago