Mysore
31
clear sky

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ರಾಜ್ಯಪಾಲರನ್ನು ಭೇಟಿಯಾದ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರಿಂದು ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿಯಾಗಿದ್ದಾರೆ.

ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಡಿಸೆಂಬರ್.‌19ರಂದು ಕಲಾಪದ ಸಂದರ್ಭದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು.

ಪ್ರಕರಣ ನಡೆಯುತ್ತಿದ್ದಂತೆ ಸಿ.ಟಿ.ರವಿ ಬಂಧನವಾಗಿತ್ತು. ಬಳಿಕ ಸಿ.ಟಿ.ರವಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಈ ನಡುವೆ ರಾಜ್ಯ ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.

ಈ ಎಲ್ಲಾ ಬೆಳವಣಿಗೆಗಳು ನಡೆದ ಬಳಿಕ ಇದೀಗ ಎಂಎಲ್‌ಸಿ ಸಿ.ಟಿ.ರವಿ ಅವರು ಇಂದು ರಾಜ್ಯಪಾಲರ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿಯಾಗಿ ಅಂದು ಸದನದಲ್ಲಿ ನಡೆದ ಘಟನೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಸಿ.ಟಿ.ರವಿ ಅವರ ಬಳಿ ರಾಜ್ಯಪಾಲರು ಮಾಹಿತಿ ಪಡೆದುಕೊಂಡು ಏನೆಲ್ಲಾ ಕ್ರಮ ಕೈಗೊಳ್ಳಲಿದ್ದಾರೆ ಹಾಗೂ ಈ ಪ್ರಕರಣ ಯಾವ ಹಂತಕ್ಕೆ ತಲುಪುತ್ತದೆ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

 

 

 

Tags: