ಬೆಂಗಳೂರು: ಕಾಂಗ್ರೆಸ್ ಪಕ್ಷ ಇನ್ನಾದರೂ ತನ್ನ ಭ್ರಷ್ಟಾಚಾರ ಹಾಗೂ ಲೂಟಿಯನ್ನು ನಿಲ್ಲಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಶೌಚಾಲಯಗಳ ಮೇಲೆ ತೆರಿಗೆ ಹಾಕಿರುವ ಕಾಂಗ್ರೆಸ್ ಪಕ್ಷ ನಡೆ ಖಂಡಿಸಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಂಎಲ್‌ಸಿ ಸಿ.ಟಿ.ರವಿ ಅವರು, ಶೌಚಾಲಯಗಳ ಮೇಲೆ ತೆರಿಗೆ ಹಾಕಿರುವ ಕಾಂಗ್ರೆಸ್ ಪಕ್ಷದ ನಡೆ ಸರಿಯಲ್ಲ. ಉಪ್ಪಿನ ಮೇಲೆ ತೆರಿಗೆ ಹಾಕಿದ್ದಾಗ ಮಹಾತ್ಮ ಗಾಂಧಿ ಹೋರಾಟ ಮಾಡಿದ್ದರು. ಇವತ್ತು ಶೌಚಾಲಯಗಳ ಮೇಲೆ ತೆರಿಗೆ ಹಾಕಿದ್ರೂ ಕಾಂಗ್ರೆಸ್‌ನವರು ಸುಮ್ಮನಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇದೆಲ್ಲವನ್ನು ನೋಡಿಕೊಂಡು ಜನರು ಎಷ್ಟು ದಿನ ಸುಮ್ಮನಿರುತ್ತಾರೆ? ಸರಿಯಾದ ಸಮಯದಲ್ಲಿ ತಕ್ಕ ಉತ್ತರ ಕೊಡುತ್ತಾರೆ ಎಂದು ಎಚ್ಚರಿಕೆ ನೀಡಿದರು.
ಇನ್ನು ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಬಗ್ಗೆ ಮಾತನಾಡಿದ ಅವರು, ಕೆಜಿಗಟ್ಟಲೇ ಚಿನ್ನ ಸಾಗಿಸೋದು ಸಾಮಾನ್ಯ ಆಗಿಬಿಟ್ಟಿದೆ. ಇದು ಕಳ್ಳರ ಸರ್ಕಾರ ಎಂದು ಕಿಡಿಕಾರಿದರು.





