ರಾಜ್ಯ

ಹಿಮಾಚಲ ಪ್ರದೇಶದಲ್ಲಿ ಶೌಚಾಲಯಗಳ ಮೇಲೆ ಕಾಂಗ್ರೆಸ್‌ ತೆರಿಗೆ: ಸಿಡಿದೆದ್ದ ಸಿ.ಟಿ.ರವಿ

ಬೆಂಗಳೂರು: ಕಾಂಗ್ರೆಸ್‌ ಪಕ್ಷ ಇನ್ನಾದರೂ ತನ್ನ ಭ್ರಷ್ಟಾಚಾರ ಹಾಗೂ ಲೂಟಿಯನ್ನು ನಿಲ್ಲಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಶೌಚಾಲಯಗಳ ಮೇಲೆ ತೆರಿಗೆ ಹಾಕಿರುವ ಕಾಂಗ್ರೆಸ್‌ ಪಕ್ಷ ನಡೆ ಖಂಡಿಸಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಂಎಲ್‌ಸಿ ಸಿ.ಟಿ.ರವಿ ಅವರು, ಶೌಚಾಲಯಗಳ ಮೇಲೆ ತೆರಿಗೆ ಹಾಕಿರುವ ಕಾಂಗ್ರೆಸ್‌ ಪಕ್ಷದ ನಡೆ ಸರಿಯಲ್ಲ. ಉಪ್ಪಿನ ಮೇಲೆ ತೆರಿಗೆ ಹಾಕಿದ್ದಾಗ ಮಹಾತ್ಮ ಗಾಂಧಿ ಹೋರಾಟ ಮಾಡಿದ್ದರು. ಇವತ್ತು ಶೌಚಾಲಯಗಳ ಮೇಲೆ ತೆರಿಗೆ ಹಾಕಿದ್ರೂ ಕಾಂಗ್ರೆಸ್‌ನವರು ಸುಮ್ಮನಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಇದೆಲ್ಲವನ್ನು ನೋಡಿಕೊಂಡು ಜನರು ಎಷ್ಟು ದಿನ ಸುಮ್ಮನಿರುತ್ತಾರೆ? ಸರಿಯಾದ ಸಮಯದಲ್ಲಿ ತಕ್ಕ ಉತ್ತರ ಕೊಡುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಇನ್ನು ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ ಬಗ್ಗೆ ಮಾತನಾಡಿದ ಅವರು, ಕೆಜಿಗಟ್ಟಲೇ ಚಿನ್ನ ಸಾಗಿಸೋದು ಸಾಮಾನ್ಯ ಆಗಿಬಿಟ್ಟಿದೆ. ಇದು ಕಳ್ಳರ ಸರ್ಕಾರ ಎಂದು ಕಿಡಿಕಾರಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

6 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

7 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

7 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

7 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

8 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

8 hours ago