Mysore
26
haze

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸವಾಲಿಗೆ ತಿರುಗೇಟು ಕೊಟ್ಟ ಸಿ.ಟಿ.ರವಿ

ಚಿಕ್ಕಮಗಳೂರು: ನಾನು ಧರ್ಮಸ್ಥಳಕ್ಕೂ ಹೋಗ್ತೀನಿ, ಸವದತ್ತಿ ಯಲ್ಲಮ್ಮನ ಬಳಿಯೂ ಹೋಗ್ತೀನಿ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ತಿರುಗೇಟು ನೀಡಿದ್ದಾರೆ.

ಸಿ.ಟಿ.ರವಿ ಅವರು ನನಗೆ ಆಕ್ಷೇಪಾರ್ಹ ಶಬ್ಧ ಬಳಸಿಲ್ಲ ಎನ್ನುವುದಾದೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್‌ ಸವಾಲು ಹಾಕಿದ್ದರು.

ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ನಡೆದ ಘಟನೆಯ ವೇಳೆ ಸಿಸಿ ಟಿವಿ ವಿಡಿಯೋ ಎಲ್ಲಾ ಇದೆ. ಹಲ್ಲೆ ಮಾಡಿದವರು ಯಾರು ಅಪರಿಚಿತರಲ್ಲ. ಎಲ್ಲರೂ ಲಕ್ಷ್ಮೀ ಹೆಬ್ಬಾಳ್ಕರ್‌ ಪಿಎ ಅವರ ಜೊತೆಗೆ ಇದ್ದವರೇ ಎಂದು ಗಂಭೀರ ಆರೋಪ ಮಾಡಿದರು.

ಇನ್ನು ಬೆಳಗಾವಿಯಲ್ಲಿ ನನ್ನನ್ನು ಬಂಧಿಸಿದಾಗ ಸವದತ್ತಿ ಯಲ್ಲಮ್ಮನ ದೇವಸ್ಥಾನದ ಎದುರಿಗೆ ಕರೆದುಕೊಂಡು ಹೋದರು. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ನನ್ನನ್ನು ಕಾಪಾಡು ಎಂದು ಯಲ್ಲಮ್ಮನಿಗೆ ಹರಕೆ ಹೊತ್ತಿದ್ದೇನೆ. ಹರಕೆ ತೀರಿಸಲು ಅಲ್ಲಿಗೆ ಹೋಗುತ್ತೇನೆ. ಇನ್ನೂ ಧರ್ಮಸ್ಥಳಕ್ಕೂ ಹೋಗುತ್ತೇನೆ ಎಂದು ಹೇಳುವ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸವಾಲಿಗೆ ತಿರುಗೇಟು ನೀಡಿದರು.

 

Tags:
error: Content is protected !!