ಚಿಕ್ಕಮಗಳೂರು: ನಾನು ಧರ್ಮಸ್ಥಳಕ್ಕೂ ಹೋಗ್ತೀನಿ, ಸವದತ್ತಿ ಯಲ್ಲಮ್ಮನ ಬಳಿಯೂ ಹೋಗ್ತೀನಿ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ತಿರುಗೇಟು ನೀಡಿದ್ದಾರೆ.
ಸಿ.ಟಿ.ರವಿ ಅವರು ನನಗೆ ಆಕ್ಷೇಪಾರ್ಹ ಶಬ್ಧ ಬಳಸಿಲ್ಲ ಎನ್ನುವುದಾದೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದರು.
ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ನಡೆದ ಘಟನೆಯ ವೇಳೆ ಸಿಸಿ ಟಿವಿ ವಿಡಿಯೋ ಎಲ್ಲಾ ಇದೆ. ಹಲ್ಲೆ ಮಾಡಿದವರು ಯಾರು ಅಪರಿಚಿತರಲ್ಲ. ಎಲ್ಲರೂ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಅವರ ಜೊತೆಗೆ ಇದ್ದವರೇ ಎಂದು ಗಂಭೀರ ಆರೋಪ ಮಾಡಿದರು.
ಇನ್ನು ಬೆಳಗಾವಿಯಲ್ಲಿ ನನ್ನನ್ನು ಬಂಧಿಸಿದಾಗ ಸವದತ್ತಿ ಯಲ್ಲಮ್ಮನ ದೇವಸ್ಥಾನದ ಎದುರಿಗೆ ಕರೆದುಕೊಂಡು ಹೋದರು. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ನನ್ನನ್ನು ಕಾಪಾಡು ಎಂದು ಯಲ್ಲಮ್ಮನಿಗೆ ಹರಕೆ ಹೊತ್ತಿದ್ದೇನೆ. ಹರಕೆ ತೀರಿಸಲು ಅಲ್ಲಿಗೆ ಹೋಗುತ್ತೇನೆ. ಇನ್ನೂ ಧರ್ಮಸ್ಥಳಕ್ಕೂ ಹೋಗುತ್ತೇನೆ ಎಂದು ಹೇಳುವ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲಿಗೆ ತಿರುಗೇಟು ನೀಡಿದರು.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…