Mysore
20
overcast clouds
Light
Dark

ಎಂಎಲ್‌ಸಿ ಚುನಾವಣೆ| ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಆರರಲ್ಲಿ ಜೆಡಿಎಸ್‌ ಪಾಲಾದದ್ದು ಕೇವಲ 1

ಬೆಂಗಳೂರು: ವಿಧಾನ ಪರಿಷತ್‌ನ ಪದವೀಧರರ, ಶಿಕ್ಷಕರ ಕ್ಷೇತ್ರಗಳಿಗೆ ಇದೇ ಜೂನ್‌.3 ರಂದು ಚುನಾವಣೆ ನಡಯಲಿದೆ. ಈ ಸಂಬಂಧ ಬಿಜೆಪಿ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಲೋಕಸಭಾ ಚುನಾವಣೆಗಾಗಿ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್‌ ಹಾಗೂ ಬಿಜೆಪಿ ವಿಧಾನ ಪರಿಷತ್‌ ಚುನಾವಣೆಗೂ ತಮ್ಮ ಮೈತ್ರಿಯನ್ನು ಮುಂದುವರೆಸಿದೆ. ಇನ್ನು ಒಟ್ಟು 6 ಕ್ಷೇತ್ರಗಳ ಪೈಕಿ ಕೇವಲ 1 ಕ್ಷೇತ್ರವನ್ನು ಮಾತ್ರ ಬಿಜೆಪಿ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ.

ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಈ ಬಾರಿ ಜೆಡಿಎಸ್‌ ಸ್ಪರ್ಧೆ ಮಾಡಲಿದೆ. ಇನ್ನು ಬಿಜೆಪಿಯಿಂದ ವಿಧಾನಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರ್‌ನಾಥ್‌ ಪಾಟೀಲ್‌, ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ, ಬೆಂಗಳೂರು ಪದವೀಧರ ಕ್ಷೇತ್ರದಿಂದ ಅ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ ನಾರಾಯಣ ಸ್ವಾಮಿ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಇ.ಸಿ ನಿಂಗರಾಜು ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಬಿಜೆಪಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Tags: