ಬೆಂಗಳೂರು: ವಿಧಾನ ಪರಿಷತ್‌ನ ಪದವೀಧರರ, ಶಿಕ್ಷಕರ ಕ್ಷೇತ್ರಗಳಿಗೆ ಇದೇ ಜೂನ್.3 ರಂದು ಚುನಾವಣೆ ನಡಯಲಿದೆ. ಈ ಸಂಬಂಧ ಬಿಜೆಪಿ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಲೋಕಸಭಾ ಚುನಾವಣೆಗಾಗಿ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಹಾಗೂ ಬಿಜೆಪಿ ವಿಧಾನ ಪರಿಷತ್ ಚುನಾವಣೆಗೂ ತಮ್ಮ ಮೈತ್ರಿಯನ್ನು ಮುಂದುವರೆಸಿದೆ. ಇನ್ನು ಒಟ್ಟು 6 ಕ್ಷೇತ್ರಗಳ ಪೈಕಿ ಕೇವಲ 1 ಕ್ಷೇತ್ರವನ್ನು ಮಾತ್ರ ಬಿಜೆಪಿ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ.
ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಈ ಬಾರಿ ಜೆಡಿಎಸ್ ಸ್ಪರ್ಧೆ ಮಾಡಲಿದೆ. ಇನ್ನು ಬಿಜೆಪಿಯಿಂದ ವಿಧಾನಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರ್‌ನಾಥ್ ಪಾಟೀಲ್, ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ, ಬೆಂಗಳೂರು ಪದವೀಧರ ಕ್ಷೇತ್ರದಿಂದ ಅ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ ನಾರಾಯಣ ಸ್ವಾಮಿ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಇ.ಸಿ ನಿಂಗರಾಜು ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಬಿಜೆಪಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಸೂರ್ಯೋದಯ ನಗರ ಬಡಾವಣೆಯಲ್ಲಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಮುಸುಕುಧಾರಿ…
ಮೈಸೂರಿನ ಲಷ್ಕರ್ ಮೊಹಲ್ಲಾದ ವೀರನಗೆರೆ ಮಾರಿಗುಡಿ ಸ್ಥಳದಲ್ಲಿ ಕುಡಿಯುವ ನೀರಿನ ಪೈಪು ಒಡೆದಿದ್ದು, ದುರಸ್ತಿ ಮಾಡಿದರೂ ಕಳಪೆ ಕಾಮಗಾರಿಯಿಂದಾಗಿ ಮತ್ತೆ…
ಕಳೆದ ೧೫ ವರ್ಷಗಳಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ೧೭ ಲಕ್ಷ ದಷ್ಟು(ಶೇ.೩೦) ಕಡಿಮೆಯಾಗಿರುವುದರ ಬಗ್ಗೆ ವಿಧಾನ…
ಡಿ.13, 14 ರಂದು ಮೈಸೂರಿನಲ್ಲಿ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವುದಾಗಿ ಪತ್ರಿಕೆಗಳಲ್ಲಿ ವರದಿಯಾಗಿತ್ತು. ಮತದಾರರ ಪಟ್ಟಿಯ ಪರಿಶೀಲನೆಗಾಗಿ…
ಇತ್ತೀಚೆಗೆ ಫ್ರಾಂಚೈಸಿ ವ್ಯವಹಾರದ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಗಳು ಹೆಚ್ಚುತ್ತಿವೆ. ನಕಲಿ ಕಂಪೆನಿಗಳು ದೊಡ್ಡ ಬ್ರಾಂಡ್ಗಳ ಹೆಸರನ್ನು ಬಳಸಿಕೊಂಡು ಜನರನ್ನು ಮೋಸ…
ಕೇಂದ್ರ ಸರ್ಕಾರ ಕಳೆದ ವಾರ ಅಧಿಕೃತ ಪ್ರಕಟಣೆಯನ್ನು ಹೊರಡಿಸಿ ಜೀವ ವಿಮೆಯೂ ಸೇರಿ ವಿಮಾ ರಂಗದಲ್ಲಿ ಇನ್ನು ಮುಂದೆ ಶೇ.೧೦೦ರಷ್ಟು…