ರಾಜ್ಯ

ಕಾಂಗ್ರೆಸ್ಸಿಗರು ಇಂದಿನ ಸಮಾವೇಶಕ್ಕೆ ಬಳಸಿದ ಹಣ ಯಾವುದು?: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ಸಿಗರು ಇಂದಿನ ಸಮಾವೇಶಕ್ಕೆ ಬಳಸಿದ ಹಣ ಯಾವುದು? ಅದರ ಲೆಕ್ಕ ಕೊಡಬೇಕು ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅದು ಕಾಂಗ್ರೆಸ್ಸಿನ ಖಾತೆಯಿಂದ ಖರ್ಚಾದ ಹಣವೇ? ಅಥವಾ ನೀವು ಸರ್ಕಾರದ ಬೊಕ್ಕಸದಿಂದ ಖರ್ಚು ಮಾಡಿದ್ದೀರಾ ಎಂಬುದನ್ನು ಜನರಿಗೆ ತಿಳಿಸಬೇಕು ಎಂದು ಒತ್ತಾಯಿಸಿದರು.

ಇನ್ನು ಸುವರ್ಣಸೌಧದ ಮುಂದೆ ಗಾಂಧಿ ಪ್ರತಿಮೆಯನ್ನು ಇವತ್ತು ಪ್ರತಿಷ್ಠಾಪನೆ ಮಾಡಿದ್ದಾರೆ. ಸರ್ಕಾರಿ ಬೊಕ್ಕಸದಿಂದ ಗಾಂಧಿ ಪ್ರತಿಮೆ ಪ್ರತಿಷ್ಠಾಪನೆಗೆ ನಮ್ಮ ವಿರೋಧವಿಲ್ಲ ಎಂದು ತಿಳಿಸಿದರು.

ಇದು ಮಹಾತ್ಮ ಗಾಂಧಿಯವರು ಕಾಲದ ಕಾಂಗ್ರೆಸ್‌ ಪಕ್ಷ ಅಲ್ಲ. ಮಹಾತ್ಮ ಗಾಂಧಿ ಸಿದ್ಧಾಂತಕ್ಕೂ ಇವತ್ತಿನ ಗಾಂಧಿಗಳ ಸಿದ್ಧಾಂತಕ್ಕೂ ಅಜಗಜಾಂತರವಿದೆ. ಅವತ್ತಿನ ಗಾಂಧಿ ಕಾಂಗ್ರೆಸ್‌ ಪಕ್ಷಕ್ಕೆ ಯಾರು ಮದ್ಯಪಾನ ಮಾಡುತ್ತಿದ್ದರೋ ಅವರು ಸದಸ್ಯರಾಗುವ ಹಾಗಿರಲಿಲ್ಲ. ಇವತ್ತಿನ ಕಾಂಗ್ರೆಸ್ಸಿನವರು ರಾತ್ರಿಯಿಡೀ ಕುಡಿದು ಮಲಗಿದ್ದು, ಬೆಳಿಗ್ಗೆ ಸಮಾವೇಶ ಮಾಡುತ್ತಾರೆ ಎಂದು ಟೀಕೆ ಮಾಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

2 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

3 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

4 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

5 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

10 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

10 hours ago