ರಾಜ್ಯ

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ಎಂಎಲ್‌ಸಿ ಸಿ.ಟಿ.ರವಿ

ಬೆಂಗಳೂರು: ಬೆಳಗಾವಿ ಪೊಲೀಸರು ನನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.

ಮಾನವಹಕ್ಕುಗಳ ಆಯೋಗಕ್ಕೆ ಇ-ಮೇಲ್​ ಮೂಲಕ 13 ಪುಟಗಳ ದೂರು ಸಲ್ಲಿಸಿದ್ದು, ಬಂಧನದ ವೇಳೆ ಪೊಲೀಸ್ ದೌರ್ಜನ್ಯ, ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ ಆರೋಪಿಸಿದ್ದಾರೆ.
ಕಾನೂನು ಬಾಹೀರ ಬಂಧನ, ಕಿಡ್ನಾಪ್‌, ನಕಲಿ ಎಫ್‌ಐಆರ್ ಕಸ್ಟಡಿಯಲ್ಲಿ ಟಾರ್ಚರ್ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತಮ್ಮ ತಲೆಗೆ ರಕ್ತ ಬಂದಿರುವ ವಿಚಾರ ಕೂಡ ದೂರಿನಲ್ಲಿ ಉಲ್ಲೇಖಿಸಿದ್ದು, ಅಂದು ನಡೆದ ಘಟನೆ ಬಗ್ಗೆ ಸಂಪೂರ್ಣವಾಗಿ ವಿವರಿಸಿ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಘಟನೆಗೆ ಕಾರಣರಾದವರ ಹೆಸರನ್ನು ಉಲ್ಲೇಖಿಸಿದ್ದಾರೆ. DG & iGP, ಬೆಳಗಾವಿ ಪೊಲೀಸ್ ಆಯುಕ್ತರಾದ ಲಾಡಾ ಮಾರ್ಟೀನ್, SP ಭೀಮಾಶಂಕರ್ ಗುಳೇದ್ ನೇರವಾಗಿ ಘಟನೆಗೆ ಕಾರಣ ಎಂದು ಸಿಟಿ ರವಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ದೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೆಸರನ್ನು ಸಹ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ತಮಗೆ ಅಪಾಯವಿದ್ದು, ಕೇಂದ್ರೀಯ ಸಶಸ್ತ್ರ ಭದ್ರತೆಯನ್ನ ಒದಗಿಸುವಂತೆ ದೂರಿನಲ್ಲಿ ಸಿ.ಟಿ.ರವಿ ಮನವಿ ಮಾಡಿದ್ದಾರೆ. ಪ್ರತಿಯೊಬ್ಬ ಅಪರಾಧಿಗೂ ಶಿಕ್ಷೆ ಆಗಬೇಕು. ಈ ಮೂಲಕ ಪೊಲೀಸ್ ಇಲಾಖೆಯಲ್ಲಿ ಶಿಸ್ತು ಮೂಡುವಂತಾಗಬೇಕು. ಮತ್ತೆ ಈ ರೀತಿಯ ಪೊಲೀಸ್ ದೌರ್ಜನ್ಯ ಮರುಕಳಿಸಬಾರದು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

1 hour ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

1 hour ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

1 hour ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

1 hour ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

12 hours ago