ರಾಜ್ಯ

ಬಿಜೆಪಿ ʼಎಂಎಲ್‌ಸಿʼಗಳ ಅವಹೇಳನಕಾರಿ ಹೇಳಿಕೆ : ರಾಜ್ಯಪಾಲರಿಗೆ ದೂರು ನೀಡಿದ ಕಾಂಗ್ರೆಸ್‌ ನಿಯೋಗ

ಬೆಂಗಳೂರು : ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದು ನಿಂದಿಸಿರುವ ಎನ್‌ ರವಿಕುಮಾರ್‌ ಹಾಗೂ ಗ್ರಾಮೀಣಾಭಿವೃದ್ದಿ ಸಚಿವರಾದ ಪ್ರಿಯಾಂಕ ಖರ್ಗೆ ಅವರನ್ನು ನಾಯಿಗೆ ಹೋಲಿಸಿದ ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ದ ಕಾನೂನಾತ್ಮಕ ಹಾಗೂ ಸಂವಿಧಾನಾತ್ಮಕವಾಗಿ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‌ ವಿಧಾನ ಪರಿಷತ್ತಿನ ಸದಸ್ಯರ ನಿಯೋಗ ಇಂದು ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.

ವಿಧಾನಪರಿಷತ್‌ನ ಆಡಳಿತ ಪಕ್ಷದ ನಾಯಕರಾದ ಎನ್‌ ಎಸ್‌ ಭೋಸರಾಜು, ಹಾಗೂ ವಿಧಾನಪರಿಷತ್ತಿನ ಮುಖ್ಯ ಸಚೇತಕರಾದ ಸಲೀಂ ಅಹ್ಮದ್‌ ಅವರ ನೇತೃತ್ವದ ನಿಯೋಗ ಇಂದು ರಾಜ್ಯಪಾಲರನ್ನು ಭೇಟಿಯಾಗಿ ದೂರು ಸಲ್ಲಿಸಿತು.

ವಿಧಾನಪರಿಷತ್‌ ಆಡಳಿತ ಪಕ್ಷದ ನಾಯಕರಾದ ಎನ್‌ ಎಸ್‌ ಭೋಸರಾಜು ಅವರು ಮಾತನಾಡಿ, ವಿಧಾನಪರಿಷತ್‌ ಸದಸ್ಯರುಗಳಾದ ಎನ್‌ ರವಿಕುಮಾರ್‌ ಹಾಗೂ ಛಲವಾದಿ ನಾರಾಯಣ ಸ್ವಾಮಿ ಬೀದಿಯಲ್ಲಿ ಸಂವಿಧಾನ ವಿರೋಧಿಯಾಗಿ ಮಾತನಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿಯ ಹೇಳಿಕೆ ನೀಡುವುದು ಸಮಂಜಸವಲ್ಲ. ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಎನ್ನುವ ಬಿಜೆಪಿ ಸದಸ್ಯರು ಸಮಾಜವನ್ನ ಹೊಡೆಯುವ ಕೆಲಸ ಮಾಡ್ತಿದ್ದಾರೆ. ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡುವುದನ್ನ ಹವ್ಯಾಸವನ್ನಾಗಿಸಿಕೊಂಡಿದ್ದಾರೆ. ದಲಿತ ಸಮುದಾಯವನ್ನು ಹೀಗೆಳೆಯುವಂತಹ ಹೇಳಿಕೆ ನೀಡಿರುವ ಛಲವಾದಿ ನಾರಾಯಣ ಸ್ವಾಮಿ ಅವರನ್ನು ಉಚ್ಚಾಟನೆ ಮಾಡಬೇಕು. ಹಾಗೆಯೇ, ಅಧಿಕಾರಿಯ ಬಗ್ಗೆ ಹೇಳಿಕೆ ನೀಡಿರುವ ರವಿಕುಮಾರ್ ಅವರ ವಿರುದ್ದ ಕಾನೂನಾತ್ಮಕವಾಗಿ ಹಾಗೂ ಸಂವಿಧಾನಾತ್ಮಕವಾದ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ ಎಂದರು.

ವಿಧಾನಪರಿಷತ್ತಿನ ಮುಖ್ಯ ಸಚೇತಕರಾದ ಸಲೀಂ ಅಹ್ಮದ್‌ ಅವರು ಮಾತನಾಡಿ, ಕಾಂಗ್ರೆಸ್ ವಿಧಾನಪರಿಷತ್ತಿನ ಸದಸ್ಯರುಗಳ ನಿಯೋಗದಲ್ಲಿ ರಾಜ್ಯಪಾಲರನ್ನ ಭೇಟಿ ಮಾಡಿ ರವಿಕುಮಾರ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ್ ಸ್ವಾಮಿ ವಿರುದ್ದ ಎರಡು ದೂರು ಸಲ್ಲಿಸಿದ್ದೇವೆ. ವಿರೋದ ಪಕ್ಷದ ನಾಯಕರಾಗಿ ಬೇಜವಾಬ್ದಾರಿ ಹೇಳಿಕೆ ನೀಡಿರುವ ಛಲವಾದಿ ನಾರಾಯಣ್ ಸ್ವಾಮಿ ವಿರುದ್ದ ಕ್ರಮ ಕೈಗೊಳ್ಳಬೇಕು. ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ಛಲವಾದಿ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ. ಐಎಎಸ್ ಅಧಿಕಾರಿಯನ್ನು ಪಾಕಿಸ್ತಾನದಿಂದ ಬಂದಿದ್ದಾರಾ? ಎಂದು ಹೇಳಿರುವ ರವಿಕುಮಾರ್‌ ಅವರನ್ನು ಅಮಾನತ್ತಗೊಳಿಸಬೇಕು. ಇವರಿಬ್ಬರೂ ಸಮಾಜದಲ್ಲಿ ತಪ್ಪು ಸಂದೇಶ ಕೊಡ್ತಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ರಾಜ್ಯಪಾಲರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ನಿಯೋಗದಲ್ಲಿ ವಿಧಾನಪರಿಷತ್‌ ಸದಸ್ಯರುಗಳಾದ ವಸಂತ್‌ಕುಮಾರ್‌, ಅನಿಲ್‌ ಕುಮಾರ್‌ ಎಂ.ಎಲ್‌. ಜಗದೇವ ಗುತ್ತೇದಾರ್‌, ಎಸ್‌ ರವಿ, ಡಿ.ಟಿ ಶ್ರೀನಿವಾಸ್‌, ದಿನೇಶ್‌ ಗೂಳಿಗೌಡ್‌, ಚನ್ನರಾಜ್‌ ಹಟ್ಟಿಹೊಳಿ, ಬಸವನಗೌಡ ಬಾದರ್ಲಿ, ಪುಟ್ಟಣ್ಣ, ನಸೀರ್‌ ಅಹ್ಮದ್‌, ಗೋವಿಂದರಾಜು, ನಾಗರಾಜ್‌ ಯಾದವ್‌, ಮಂಜುನಾಥ್‌ ಭಂಡಾರಿ ನಿಯೋಗದಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

2 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

3 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

3 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

3 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

4 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

4 hours ago