ಬಾಗಲಕೋಟೆ: ರಾಜ್ಯ ಕಾಂಗ್ರೆಸ್ ನಾಯಕರು ಜನರ ಸಮಸ್ಯೆಗೆ ಸ್ಪಂದಿಸುವ ಬದಲು ತಮ್ಮ ತಮ್ಮ ಕುರ್ಚಿ ಭದ್ರತೆಗೆ ಆಟ ಆಡುತ್ತಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪ ಮಾಡಿದ್ದಾರೆ.
ಈ ಕುರಿತು ಬಾಗಲಕೋಟೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ಔತಣಕೂಟನಾದರೂ ಮಾಡಲಿ, ಏನಾದರೂ ಮಾಡಿಕೊಳ್ಳಲಿ. ಅದು ಅವರ ಆಂತರಿಕ ವಿಚಾರ. ರಾಜ್ಯ ಆರ್ಥಿಕವಾಗಿ ಸಂಕಷ್ಟದಲ್ಲಿದೆ. ಕಾನೂನು ಸುವ್ಯವಸ್ಥೆ ಹಾಳಾಗಿರುವ ಜೊತೆಗೆ ದಲಿತರ ಮೇಲೆ ದೌರ್ಜನ್ಯ ಆಗುತ್ತಿದೆ. ವಿದ್ಯಾರ್ಥಿಗಳಿಗೆ ಸರಿಯಾದ ಶಿಷ್ಯ ವೇತನ ಸಿಗುತ್ತಿಲ್ಲ ಎಂದು ದೂರಿದರು.
ರಾಜ್ಯದಲ್ಲಿ ಅನ್ನದಾತರಿಗೆ ಪರಿಹಾರ ಸಿಗುತ್ತಿಲ್ಲ. ಬಾಣಂತಿಯರ ಸಾವು ಹೆಚ್ಚಾಗುತ್ತಿದೆ. ಆದರೆ ಕಾಂಗ್ರೆಸ್ ನಾಯಕರಿಗೆ ಇವೆಲ್ಲಾ ಬೇಕಿಲ್ಲ. ಬರೀ ರಾಜಕಾರಣವೇ ಮುಖ್ಯವಾಗಿದೆ. ಯಾರು ಮುಂದಿನ ದಿನಗಳಲ್ಲಿ ಸಿಎಂ ಆಗಬೇಕು ಎಂಬುದೇ ಚರ್ಚೆಯಾಗುತ್ತಿದೆ. ಎಲ್ಲರೂ ಕೂಡ ಕುರ್ಚಿಯ ಭದ್ರತೆಗಾಗಿ ಆಟ ಆಡುತ್ತಿದ್ದಾರೆ. ಇವರಿಗೆ ರಾಜ್ಯದ ಜನರ ಸಂಕಷ್ಟ ದೂರ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಶಾಸಕರು ಅಭಿವೃದ್ಧಿಗೆ ಅವಕಾಶ ಸಿಗುತ್ತಿಲ್ಲ ಎನ್ನುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಉತ್ತರ ಕೊಡಲಿ. ರಾಜ್ಯದ ಆರ್ಥಿಕ ಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ರಾಜ್ಯದಲ್ಲಿ ಅಭಿವೃದ್ಧಿ ಮಾಡಲು ಹಣವಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…
ಉಡುಪಿ : ಐಲ್ಯಾಂಡ್‌ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…
ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…
ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…
ಬೆಂಗಳೂರು : ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ನಗರದ ಮಾಣೆಕ್‌ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…
ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ.…