ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರೆಸಾರ್ಟ್‌ನಲ್ಲಿ ತೇಜಸ್ವಿ ಸೂರ್ಯ ಹಾಗೂ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ವಿವಾಹ ನೆರವೇರಿದೆ.
ಇನ್ನು ಮದುವೆಗೆ ಎರಡು ಕುಟುಂಬದ ಸದಸ್ಯರು ಹಾಗೂ ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಇಂದು ಬೆಳಿಗ್ಗೆ 10.45ರ ಶುಭ ತುಲಾ ಲಗ್ನದಲ್ಲಿ ಶಿವಶ್ರೀ ಸ್ಕಂದ ಅವರ ಕೊರಳಿಗೆ ತೇಜಸ್ವಿ ಸೂರ್ಯ ಮಾಂಗಲ್ಯಧಾರಣೆ ಮಾಡಿದರು.
ಇನ್ನು ಮಾರ್ಚ್.9ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಸ್ಕಂದ ಪ್ರಸಾದ್ ಆರತಕ್ಷತೆ ನಡೆಯಲಿದೆ. ಈ ವೇಳೆ ರಾಜ್ಯ ಹಾಗೂ ದೇಶದ ರಾಜಕೀಯ ಗಣ್ಯರು ಭಾಗಿಯಾಗುವ ಸಾಧ್ಯತೆಯಿದೆ.





