ಬಳ್ಳಾರಿ: ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯ ಉಸ್ತುವಾರಿಗಳು ತಮಗೆ ಅವಮಾನ ಮಾಡಿದ್ದಾರೆಂದು ಆಕ್ರೋಶಗೊಂಡಿರುವ ಮಾಜಿ ಸಚಿವ ಬಿ. ಶ್ರೀಮುಲು ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಫೋನ್ ಕರೆ ಮಾಡಿ ಮನವೊಲಿಸಿದ್ದಾರೆ.
ಸಭೆಯಲ್ಲಿ ತಮಗಾದ ಅವಮಾನಕ್ಕೆ ನಾನು ಬೇಕಿದ್ದರೆ ಪಕ್ಷಕ್ಕೆ ರಾಜೀನಾಮೆ ಕೋಡುತ್ತೇನೆ ಈ ತರ ಅವಮಾನ ಸಹಿಸಿಕೊಳ್ಳಲಾರೆ ಎಂದು ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದ್ದರು.
ಇದಕ್ಕೆ ಜೆ.ಪಿ ನಡ್ಡಾ ಶ್ರೀ ರಾಮುಲು ಅವರಿಗೆ ಫೋನ್ ಕರೆ ಮಾಡಿ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ದೆಹಲಿಗೆ ಬನ್ನಿ ಕೂತು ಮಾತನಾಡೋಣ. ಪಕ್ಷ ಬಿಡುವ ಬಗ್ಗೆ, ಪಕ್ಷದ ವಿರುದ್ಧ ಏನೂ ಮಾತನಾಡಬೇಡಿ ಎಂದು ಮನವೊಳಿಸುವ ಮೂಲಕ ಶ್ರೀರಾಮುಲು ಅವರ ನಿರ್ಧಾರಕ್ಕೆ ಸ್ವಲ್ಪ ಮಟ್ಟಿನ ಬ್ರೇಕ್ ಹಾಕಿದ್ದಾರೆ.
ಸಂಡೂರು ಉಪಚುನಾವಣೆ ಸೋಲಿಗೆ ತಮ್ಮನ್ನು ದೂಷಿಸಿದ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಶ್ ವಿರುದ್ಧ ಶ್ರೀ ರಾಮುಲು ಆಕ್ರೋಶ ವ್ಯಕ್ತಪಡಿಸಿದ್ದರು. ವಿಜಯೇಂದ್ರ ಮತ್ತು ಜನಾರ್ಧನ ರೆಡ್ಡಿ ಒಟ್ಟಿಗೆ ಸೇರಿ ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ಬೇಕಿದ್ದರೆ ಈಗಲೇ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಹೊರನಡೆಯುತ್ತೇನೆ ಎಂದು ಶ್ರೀ ರಾಮುಲು ಅಸಮಾಧಾನ ಹೊರಹಾಕಿದ್ದರು.





