ರಾಜ್ಯ

ಫೋನ್‌ ಕರೆಯಲ್ಲೆ ಶ್ರೀರಾಮುಲು ಮನವೊಲಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ

ಬಳ್ಳಾರಿ: ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ರಾಜ್ಯ ಉಸ್ತುವಾರಿಗಳು ತಮಗೆ ಅವಮಾನ ಮಾಡಿದ್ದಾರೆಂದು ಆಕ್ರೋಶಗೊಂಡಿರುವ ಮಾಜಿ ಸಚಿವ ಬಿ. ಶ್ರೀಮುಲು ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಫೋನ್‌ ಕರೆ ಮಾಡಿ ಮನವೊಲಿಸಿದ್ದಾರೆ.

ಸಭೆಯಲ್ಲಿ ತಮಗಾದ ಅವಮಾನಕ್ಕೆ ನಾನು ಬೇಕಿದ್ದರೆ ಪಕ್ಷಕ್ಕೆ ರಾಜೀನಾಮೆ ಕೋಡುತ್ತೇನೆ ಈ ತರ ಅವಮಾನ ಸಹಿಸಿಕೊಳ್ಳಲಾರೆ ಎಂದು ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದ್ದರು.

ಇದಕ್ಕೆ ಜೆ.ಪಿ ನಡ್ಡಾ ಶ್ರೀ ರಾಮುಲು ಅವರಿಗೆ ಫೋನ್‌ ಕರೆ ಮಾಡಿ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ದೆಹಲಿಗೆ ಬನ್ನಿ ಕೂತು ಮಾತನಾಡೋಣ. ಪಕ್ಷ ಬಿಡುವ ಬಗ್ಗೆ, ಪಕ್ಷದ ವಿರುದ್ಧ ಏನೂ ಮಾತನಾಡಬೇಡಿ ಎಂದು ಮನವೊಳಿಸುವ ಮೂಲಕ ಶ್ರೀರಾಮುಲು ಅವರ ನಿರ್ಧಾರಕ್ಕೆ ಸ್ವಲ್ಪ ಮಟ್ಟಿನ ಬ್ರೇಕ್‌ ಹಾಕಿದ್ದಾರೆ.

ಸಂಡೂರು ಉಪಚುನಾವಣೆ ಸೋಲಿಗೆ ತಮ್ಮನ್ನು ದೂಷಿಸಿದ ರಾಜ್ಯ ಉಸ್ತುವಾರಿ ರಾಧಾಮೋಹನ್‌ ದಾಶ್‌ ವಿರುದ್ಧ ಶ್ರೀ ರಾಮುಲು ಆಕ್ರೋಶ ವ್ಯಕ್ತಪಡಿಸಿದ್ದರು. ವಿಜಯೇಂದ್ರ ಮತ್ತು ಜನಾರ್ಧನ ರೆಡ್ಡಿ ಒಟ್ಟಿಗೆ ಸೇರಿ ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ಬೇಕಿದ್ದರೆ ಈಗಲೇ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಹೊರನಡೆಯುತ್ತೇನೆ ಎಂದು ಶ್ರೀ ರಾಮುಲು ಅಸಮಾಧಾನ ಹೊರಹಾಕಿದ್ದರು.

ಆಂದೋಲನ ಡೆಸ್ಕ್

Recent Posts

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

1 min ago

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

16 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

17 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

18 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

19 hours ago