ರಾಜ್ಯ

ಕಾಂಗ್ರೆಸ್‌ ಸರ್ಕಾರದಿಂದ ಮತ್ತೊಮ್ಮೆ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಎಡವಟ್ಟು: ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಸಾಲು ಸಾಲು ಎಡವಟ್ಟು ನಡೆಯುತ್ತಿದ್ದು, ಇದೀಗ ಮತ್ತೊಮ್ಮೆ ಕೆಪಿಎಸ್‌ಸಿ(ಕೆಎಎಸ್‌) ಮರು ಪರೀಕ್ಷೆಯಲ್ಲೂ ಕನ್ನಡ ಪ್ರಶ್ನೆ ಪ್ರತಿಕೆಯಲ್ಲಿ ತಪ್ಪು ಕಂಡುಬಂದಿದೆ ಎಂದು ಬಿಜೆಪಿ ಕಿಡಿಕಾರಿದೆ.

ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ, ತುಘಲಕ್ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಎಡಬಿಡಂಗಿ ಮಂದಿ ಮಾಗಧರಿಂದ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೊಮ್ಮೆ ಎಡವಟ್ಟು ಉಂಟಾಗಿದೆ. ಕನ್ನಡ ನಾಡಿನಲ್ಲಿ ಕನ್ನಡದ ಅನುವಾದದಲ್ಲಿಯೇ ಮತ್ತೊಮ್ಮೆ ತಪ್ಪಾಗಿದೆ ಎಂದು ವಾಗ್ದಾಳಿ ನಡೆಸಿದೆ.

ಕಳೆದ ಆಗಸ್ಟ್‌ 27 ರಂದು ತರಾತುರಿಯಲ್ಲಿ ಪರೀಕ್ಷೆ ನಡೆಸಿ, ಪ್ರಶ್ನೆಪತ್ರಿಕೆಯಲ್ಲಿ ಗೊಂದಲ ಸೃಷ್ಟಿಸಿ, ಯುವಕರ ಭವಿಷ್ಯದ ಕನಸುಗಳಿಗೆ ಕಲ್ಲು ಹಾಕಿದ್ದ ಸರ್ಕಾರ ಈಗ ಮತ್ತೊಮ್ಮೆ ಅದೇ ತಪ್ಪನ್ನು ಪುನರಾರ್ವತಿಸಿದೆ. ರಾಜ್ಯದಾದ್ಯಂತ ನಡೆಸಲಾದ ಕೆಎಎಸ್ ಶ್ರೇಣಿಯ ಗ್ರೂಪ್ ಎ ಹಾಗೂ ಗ್ರೂಪ್ ಬಿ ಹುದ್ದೆಗಳ ಪರೀಕ್ಷಾ ಪ್ರಶ್ನೆಪತ್ರಿಕೆಯ ಅನುವಾದದಲ್ಲಿ ಮತ್ತೊಮ್ಮೆ ಎಡವಟ್ಟು ಮಾಡಿದೆ. ಅದಲ್ಲದೇ ಕೆಲವು ಕೇಂದ್ರಗಳಲ್ಲಿ ಒಎಂಆರ್ ಶೀಟ್, ಹಾಲ್ ಟಿಕೆಟ್ ಸಂಖ್ಯೆಯಲ್ಲಿ ಹೊಂದಾಣಿಕೆಯಾಗದೆ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದೆ. ಪರೀಕ್ಷಾರ್ಥಿಗಳ ಕೈಗೆ ಪ್ರಶ್ನೆಪತ್ರಿಕೆ ಹೋಗುವುದಕ್ಕೂ ಮುನ್ನ ಪರಿಶೀಲಿಸುವ ಅಗತ್ಯವಿತ್ತು. ಸರಿಯಾದ ಅನುವಾದ ಮಾಡದೇ ಇರುವುದು ನಾಚಿಕೆಗೇಡಿನ ವಿಷಯ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಸಾಲು ಸಾಲು ಎಡವಟ್ಟುಗಳಾಗುತ್ತಿದ್ದು, ಕೆ.ಎ.ಎಸ್ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿನ ಸಾಲು ಸಾಲು ತಪ್ಪುಗಳಿಂದಾಗಿ ನಡೆದ ಮರು ಪರೀಕ್ಷೆಯಲ್ಲಿಯೂ ಸಹ ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಸಾಲು ಸಾಲು ತಪ್ಪುಗಳು ಕಂಡು ಬಂದಿವೆ ಎಂದು ಕಿಡಿಕಾರಿದೆ.

ಸಿಎಂ ಸಿದ್ದರಾಮಯ್ಯ ಕನ್ನಡದ ಹೆಸರಿನಲ್ಲಿ ರಾಜಕಾರಣ ಮಾಡುವ ನಿಮ್ಮಿಂದ ಕನ್ನಡಕ್ಕೆ ಅವಮಾನವಾಗುತ್ತಿದೆ. ಪರಿಕ್ಷಾರ್ಥಿಗಳ ಬದುಕಿನ ಜೊತೆ ಇನ್ನೆಷ್ಟು ಚೆಲ್ಲಾಟವಾಡುತ್ತಿರಾ..?? ಒಂದು ಪರೀಕ್ಷೆಯನ್ನು ಸರಿಯಾಗಿ ನಡೆಸಲು ನಿಮಗೆ ಯೋಗ್ಯತೆ ಇಲ್ಲವೇ..?? ಎಂದು ಪ್ರಶ್ನಿಸಿದೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

2 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

2 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

2 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

2 hours ago

ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…

2 hours ago