ಬೆಂಗಳೂರು: ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಮಿಷನ್ ಬೇಡಿಕೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್ ಪಾಂಚಾಳ್ ಪ್ರಕರಣ ಹಳ್ಳ ಹಿಡಿಯುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಬಿಜೆಪಿಯು ಸಿಐಡಿ ತನಿಖೆಯಲ್ಲಿ ಖರ್ಗೆ ಕುಟುಂಬದ ಪ್ರಭಾವ ಎದ್ದು ಕಾಣುತ್ತಿದೆ. ಖರ್ಗೆ ಕುಟುಂಬದ ಹಸ್ತಕ್ಷೇಪದಿಂದಾಗಿಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬರನ್ನೂ ಬಂಧಿಸಿಲ್ಲ.
ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್ ಪಾಂಚಾಳ್ ಬರೆದಿರುವ ಡೆತ್‌ನೋಟ್‌ನಲ್ಲಿ ಪ್ರಿಯಾಂಕ್ ಖರ್ಗೆ ಸೇರಿದಂತೆ ಪ್ರಿಯಾಂಕ್ ಖರ್ಗೆಯ 9 ಮಂದಿ ಅತ್ಯಾಪ್ತರ ಹೆಸರು ಉಲ್ಲೇಖಗೊಂಡಿದೆ. ಆದರೆ ಸಿಐಡಿ ತನಿಖೆ ಆರಂಭವಾಗಿ 13 ದಿನ ಕಳೆದರೂ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣುತ್ತಿಲ್ಲ.
ಪ್ರಕರಣದಲ್ಲಿ ಕೇವಲ ಸಚಿವರ, ಸರ್ಕಾರದ ಪ್ರಭಾವವಲ್ಲದೆ, ಎಐಸಿಸಿ ಪ್ರಭಾವವೂ ಎದ್ದು ಕಾಣುತ್ತಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಕುಟುಂಬ ಕೇಂದ್ರೀಕೃತವಾಗಿ ತನಿಖೆ ನಡೆಸದಂತೆ ತನಿಖೆಯ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದೆ.
ಆದಷ್ಟು ಬೇಗ ಆತ್ಮಹತ್ಯೆಗೆ ಶರಣಾಗಿರುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಬೇಕು. ಸಚಿನ್ ಆತ್ಮಹತ್ಯೆಗೆ ಕಾರಣರಾದ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಆಗ್ರಹಿಸಿದೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…