ರಾಜ್ಯ

ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪೋಸ್ಟರ್‌ ಅಭಿಯಾನ

ಬೆಂಗಳೂರು: ಬೀದರ್‌ನ ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಪೋಸ್ಟರ್‌ ಅಭಿಯಾನ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ.

ಇಂದು ಸಚಿವ ಪ್ರಿಯಾಂಕ್‌ ಖರ್ಗೆ ಮನೆ ಮುಂದೆ ಜಮಾಯಿಸಿದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಪೋಸ್ಟರ್‌ ಅಂಟಿಸಿ ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್‌ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಸದಸ್ಯ ಸಿ.ಟಿ.ರವಿ ಹಾಗೂ ಬಿಜೆಪಿ ಕಾರ್ಯಕರ್ತರೆಲ್ಲಾ ಸೇರಿ ಪ್ರಿಯಾಂಕ್ ಖರ್ಗೆ ಪ್ರಾಯೋಜಿತ ಸುಪಾರಿ, ಸುಪಾರಿ ಸ್ಪಾನ್ಸರ್‌ ಖರ್ಗೆ ಎಂಬ ಪೋಸ್ಟರ್‌ ಹಿಡಿದು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು, ಪ್ರಾಮಾಣಿಕ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ʼಸೂಸೈಡ್‌ ಭಾಗ್ಯʼ ಹಾಗೂ ರಾಜಕೀಯ ಎದುರಾಳಿಗಳಿಗೆ ʼಸುಪಾರಿ ಭಾಗ್ಯʼ ದ ಗ್ಯಾರಂಟಿ ನೀಡಿದ ಕಾಂಗ್ರೆಸ್‌ ಸರ್ಕಾರ ಹಾಗೂ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಆತ್ಮಹತ್ಯೆಗೆ ಶರಣಾಗಿರುವ ಸಚಿನ್‌ ಕುಟುಂಬಕ್ಕೆ ನ್ಯಾಯ ಸಿಗಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲಲ್ಲ. ನಮ್ಮ ಹೋರಾಟ ನಿಲ್ಲಬೇಕೆಂದರೆ ಸಚಿವ ಸ್ಥಾನಕ್ಕೆ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

3 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

3 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

9 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

9 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

9 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

10 hours ago