ಬೆಂಗಳೂರು: ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸರ್ಕಾರವಿದ್ದಾಗ ಕೂಡ ಬಸ್ ಟಿಕೆಟ್ ದರ ಏರಿಕೆ ಆಗಿದೆ ಎಂದು ಟಾಂಗ್ ನೀಡಿದ್ದಾರೆ.
ಜನವರಿ.5ರಿಂದ ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆಯಾಗಲಿರುವ ಬಗ್ಗೆ ಈಗಾಗಲೇ ಸರ್ಕಾರ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಟಿಕೆಟ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ರಾಜ್ಯ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಟಿಕೆಟ್ ದರ ಏರಿಕೆ ಮಾಡುವುದು ಬೇಡ ಎಂದು ಆಗ್ರಹಿಸುತ್ತಿದ್ದಾರೆ.
ಈ ಬೆನ್ನಲ್ಲೇ ಬಿಜೆಪಿ ನಾಯಕರ ಪ್ರತಿಭಟನೆ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಂದಾಗಿನಿಂದಲೂ ರೂಪಾಯಿ ಮೌಲ್ಯ ಕಡಿಮೆಯಾಗಿದೆ. ಡಾಲರ್ ಬೆಲೆ ಕಡಿಮೆಯಾದರೂ ಕಳೆದ 9 ವರ್ಷಗಳಿಂದ ಪೆಟ್ರೋಲ್, ಡೀಸೆಲ್ ದರ ಇಳಿಸಿಲ್ಲ. 2020ರ ಬಿಜೆಪಿ ಆಡಳಿತದ ಅವಧಿಯಲ್ಲಿ ಬಸ್ ಪ್ರಯಾಣ ದರ ಏರಿಕೆ ಆಗಿತ್ತು. ಆಗ ಜನರ ತೊಂದರೆ ನಿಮಗೆ ತಿಳಿಯಲಿಲ್ಲವೇ ಎಂದು ಬಿಜೆಪಿ ನಾಯಕರ ವಿರುದ್ಧವೇ ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲೇ ಪ್ರಯಾಣ ದರ ಕಡಿಮೆ ಇದೆ. ಬಿಜೆಪಿ ನಾಯಕರು ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಈ ಕೆಲಸ ಮಾಡುವುದನ್ನು ಬಿಜೆಪಿಯವರು ಮೊದಲು ಬಿಡಬೇಕು ಎಂದು ವಾಗ್ದಾಳಿ ನಡೆಸಿದರು.
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…