ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಶಾಸಕ ಡಾ. ಅಶ್ವಥ್ ನಾರಾಯಣ್ ಹೇಳಿದರು.
ನಗರದಲ್ಲಿಂದು (ಜುಲೈ.9) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಅನುಕೂಲದ ಆಧಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಿವೇಶನ ಪಡೆದಿದ್ದಾರೆ. ಮುಡಾದಲ್ಲಿ ಭಾರೀ ಅಕ್ರಮ ನಡೆದಿದೆ. ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕನಾಗಿದ್ದಾಗ, ಮುಖ್ಯಮಂತ್ರಿ ಆಗಿದ್ದಾಗಲೂ ಸಾಕಷ್ಟು ಹಗರಣಗಳನ್ನು ಮಾಡಿದ್ದಾರೆ ಎಂದು ಕಿಡಿಕಾರಿದರು.
ಸಿಎಂ ಸಿದ್ದರಾಮಯ್ಯ ಅವರ ಬಂಡತನ, ಹಗಲು ದರೋಡೆ ಜನರಿಗೆಲ್ಲಾ ಗೊತ್ತಾಗಿದೆ. ಅವರು ಈ ಪ್ರಕರಣವನ್ನು ನ್ಯಾಯಾಂಗ ತನಿಖೆ ಒಪ್ಪಿಸಲು ತಯಾರಿಲ್ಲ. ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಮುಡಾ ಅಕ್ರಮದಲ್ಲಿ ಪಾರದರ್ಶಕ ತನಿಖೆಗೆ ಆಗ್ರಹಿಸಿ ಮೈಸೂರಿನಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಜುಲೈ. 12ರಂದು ಮೈಸೂರಲ್ಲಿ ಹೋರಾಟ ನಡೆಸಲಾಗುವುದು ಎಂದು ಅಶ್ವಥ್ ನಾರಾಯಣ್ ಹೇಳಿದರು.
ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…
ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…
ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…
ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…