ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಮಗಮದಲ್ಲಿ ನಡೆದ ಹಗರಣ ಹಾಗೂ ಮುಡಾ ಹಗರಣಗಳನ್ನ ಖಂಡಿಸಿ ಇಂದು ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಯಿತು. ಹಗರಣಗಳ ವಿರುದ್ಧ ತೀವ್ರ ಖಂಡನೆ ವ್ಯಕ್ತಪಡಿಸಿ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಬಳಿಕ ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಿದರು. ಬಳಿಕ ಬಿ.ವೈ ವಿಜಯೇಂದ್ರ, ಸಿ.ಟಿ ರವಿ, ಸುನೀಲ್ ಕುಮಾರ್ ಸೇರಿ ಇತರ ನಾಯಕರನ್ನ ಪೊಲೀಸರು ವಶಕ್ಕೆ ಪಡೆದುಕೊಂಡರು.