ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಿವೇಶನ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ದಧ ಬಿಜೆಪಿ ನಾಯಕರು ಬೆಂಗಳೂರಿನಲ್ಲಿಂದು “ಮೈಸೂರು ಚಲೋ” ಪ್ರತಿಭಟನೆ ನಡೆಸಿದರು.
ಬೆಂಗಳೂರಿನ ಕೆಂಗೇರಿಯ ಮೈಸೂರು ರಸ್ತೆಯಲ್ಲಿ ಬಿಜೆಪಿಯ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಮೈಸೂರು ಚಲೋ ಪ್ರತಿಭಟನೆ ನಡೆಯಿತು.
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಖಾಕಿ ತಡೆದಿದ್ದಾರೆ.
ಕೆಂಗೇರಿಯ ಕದಂಬ ಹೋಟೆಲ್ ಬಳಿ ಪ್ರತಿಭಟನಾ ನಿರತ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಶಾಸಕ ಮುನಿರತ್ನ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ಬಂಧಿಸಿ ಬಿಎಂಟಿಸಿ ವಾಹನದಲ್ಲಿ ಕರೆದೊಯ್ದಿದ್ದಾರೆ.





