ರಾಜ್ಯ

ಮುಡಾ ಹಗರಣ: ಬಿಜೆಪಿಯಿಂದ ಮೈಸೂರು ಚಲೋ ಪ್ರತಿಭಟನೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಿವೇಶನ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಸರ್ಕಾರದ ವಿರುದ್ದಧ ಬಿಜೆಪಿ ನಾಯಕರು ಬೆಂಗಳೂರಿನಲ್ಲಿಂದು “ಮೈಸೂರು ಚಲೋ” ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ಕೆಂಗೇರಿಯ ಮೈಸೂರು ರಸ್ತೆಯಲ್ಲಿ ಬಿಜೆಪಿಯ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಮೈಸೂರು ಚಲೋ ಪ್ರತಿಭಟನೆ ನಡೆಯಿತು.

ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಖಾಕಿ ತಡೆದಿದ್ದಾರೆ.

ಕೆಂಗೇರಿಯ ಕದಂಬ ಹೋಟೆಲ್‌ ಬಳಿ ಪ್ರತಿಭಟನಾ ನಿರತ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಶಾಸಕ ಮುನಿರತ್ನ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ಬಂಧಿಸಿ ಬಿಎಂಟಿಸಿ ವಾಹನದಲ್ಲಿ ಕರೆದೊಯ್ದಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

1 hour ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

1 hour ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

1 hour ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago