ರಾಜ್ಯ

ಗ್ಯಾರಂಟಿಗೆ ಹಣ ಹೊಂದಿಸಲು ರಾಜ್ಯ ಸರ್ಕಾರ ಪರದಾಟ ಆಡುತ್ತಿದೆ ಎಂದ ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದು, ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಸಜ್ಜಾಗಿದ್ದಾರೆ.

ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲೆ ಬೆಲೆ ಏರಿಕೆ ಬೆನ್ನಲ್ಲೇ ಈಗ ಹಾಲಿನ ದರ ಹೆಚ್ಚಳ ಮಾಡಲಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಜನರಿಗೆ ಏನೂ ಉಪಯೋಗವಲ್ಲದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆಯನ್ನು ಏರಿಕೆ ಮಾಡುತ್ತಲೇ ಬರುತ್ತಿದೆ. ಈಗ ಹಾಲಿನ ಬೆಲೆ ಏರಿಕೆ ಮಾಡಲಾಗಿದ್ದು, ಜನಸಾಮಾನ್ಯರ ಹೊಟ್ಟೆಯ ಮೇಲೆ ಬರೆ ಎಳೆದಿದೆ ಎಂದು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಕೆಂಡ ಕಾರಿದ್ದಾರೆ.

ಸರ್ಕಾರ ಹಾಲಿನ ದರ ಏರಿಕೆ ಮಾಡಿರುವ ಬಗ್ಗೆ ಬೆಂಗಳೂರಿನಲ್ಲಿ ತೀವ್ರ ವಾಗ್ದಾಳಿ ನಡೆಸಿದ ವಿಪಕ್ಷ ನಾಯಕ ಆರ್.ಅಶೋಕ್‌ ಅವರು, ರಾಜ್ಯದಲ್ಲಿ ದಿನೇ ದಿನೇ ಯಾವುದಾದರೊಂದು ವಸ್ತುಗಳ ಬೆಲೆಯನ್ನು ಏರಿಕೆ ಮಾಡುತ್ತಲೇ ಬರಲಾಗುತ್ತಿದೆ. ಬೆಲೆ ಏರಿಕೆಗೆ ಮೂಲ ಕಾರಣವೇ ಗ್ಯಾರಂಟಿ ಯೋಜನೆ. ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಸಾಧ್ಯವಾಗದೇ ರಾಜ್ಯ ಸರ್ಕಾರ ಈ ರೀತಿಯ ಆಟವಾಡುತ್ತಿದೆ. ಯಾವುದೇ ಮುಂದಾಲೋಚನೆ ಇಲ್ಲದೆಯೇ ಗ್ಯಾರಂಟಿ ಯೋಜನೆ ಜಾರಿ ಮಾಡಿ ಈಗ ಜನಸಾಮಾನ್ಯರು ನರಳುವಂತೆ ಮಾಡಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಇನ್ನೂ ಮುಂದುವರಿದು ಮಾತನಾಡಿದ ಅವರು, ಹಾಲಿನ ಬೆಲೆ ಏರಿಕೆ ವಿರುದ್ಧ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಲಿದೆ. ಜುಲೈ.3 ಅಥವಾ 4ರಂದು ನಮ್ಮ ನಾಯಕರುಗಳೆಲ್ಲಾ ಸೇರಿ ಬೃಹತ್‌ ಪ್ರತಿಭಟನೆ ನಡೆಸುತ್ತೇವೆ. ಅಂದು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಪ್ರತಿಭಟನೆಯ ಬಗ್ಗೆ ಮಾಹಿತಿ ನೀಡಿದರು. ಹಾಲಿನ ದರ ಇಳಿಕೆ ಮಾಡುವವರೆಗೂ ನಮ್ಮ ಹೋರಾಟ ಮುಂದುವರಿಯಲಿದ್ದು, ರಾಜ್ಯ ಸರ್ಕಾರ ಈಗಲೇ ಎಚ್ಚೆತ್ತುಕೊಂಡು ಬೆಲೆ ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ ; ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿದೆ ಮೈಸೂರು ಅರಮನೆ

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…

9 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…

14 hours ago

ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ ; ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…

14 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

17 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

19 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

23 hours ago