Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಮೀಸಲಾತಿ ಕುರಿತು ರಾಹುಲ್‌ ಗಾಂಧಿ ಹೇಳಿಕೆ ಖಂಡಿಸಿ ನಾಳೆ ಬಿಜೆಪಿ ಪ್ರತಿಭಟನೆ

ಮೈಸೂರು: ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅಮೆರಿಕದಲ್ಲಿ ಮೀಸಲಾತಿ ರದ್ದುಪಡಿಸುವುದಾಗಿ ಹೇಳಿರುವ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಸದ್ಯ ಈ ವಿಚಾರವಾಗಿ ಬಿಜೆಪಿ ನಾಯಕರು ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೀಸಲಾತಿ ಹೇಳಿಕೆಯನ್ನು ಖಂಡಿಸಿ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ ನೀಡಿದೆ.

ಈ ಕುರಿತು ಚಿಕ್ಕಮಗಳೂರಿನಲ್ಲಿ ಬಿಜೆಪಿ ಶಾಸಕ ಸುನೀಲ್‌ ಕುಮರ್‌ ಮಾತನಾಡಿ, ರಾಹುಲ್‌ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿ ನಾಳೆ ಪ್ರತಿಭಟಿಸಲಿದೆ. ರಾಹುಲ್‌ ಈ ಕೂಡಲೇ ದೇಶದ ಜನರ ಕ್ಷಮೆ ಕೇಳಬೇಕು. ರಾಹುಲ್‌ ಅವರ ಮೀಸಲಾತಿ ರದ್ದು ಹೇಳಿಕೆಯಿಂದ ದೇಶದ ಎಸ್‌ಸಿ, ಎಸ್‌ಟಿ ಸಮುದಾಯ ಗಾಬರಿಯಾಗಿದೆ ಎಂದು ರಾಹುಲ್‌ ವಿರುದ್ಧ ವಗ್ದಾಳಿ ನಡೆಸಿದರು.

ವಿಧಾನ ಪರಿಷತ್‌ ಸದಸ್ಯ ಎನ್‌ ರವಿಕುಮಾರ್‌ ಪ್ರತಿಕ್ರಿಯಿಸಿ, ಮಲ್ಲಿಕಾರ್ಜುನ್‌ ಖರ್ಗೆ, ಸಿದ್ದರಾಮಯ್ಯರನ್ನು ಪ್ರಶ್ನೆ ಮಾಡುತ್ತೇನೆ. ಸಂವಿಧಾನ ರಕ್ಷಣೆ ಮಾಡುತ್ತೇವೆ, ಮೀಸಲಾತಿ ಉಳಿಸುತ್ತೇವೆ ಎಂದು ಬೊಬ್ಬೆ ಹೊಡೆಯುವ ನೀವುಗಳು, ಇದಕ್ಕೆ ಏನು ಹೇಳುವಿರಿ. ರಾಹುಲ್‌ ಗಾಂಧಿ ಮೀಸಲಾತಿ ನಿಲ್ಲಿಸುತ್ತೇವೆ ಎಂದು ಹೇಳಿದ್ದಾರೆ. ರಾಹುಲ್‌ ಗಾಂಧಿಗೆ ನಾಚಿಕೆ ಆಗಬೇಕು. ನಾಳೆ ನಾಡಿದ್ದು ರಾಜ್ಯದಲ್ಲಿ ರಾಹುಲ್‌ ಗಾಂಧಿ ಪ್ರತಿಕೃತಿ ದಹನ ಮಾಡುತ್ತೇವೆ. ಅಂಬೇಡ್ಕರ್‌ ಸೋಲಿಸಿದ್ದ ಇದೇ ಕಾಂಗ್ರೆಸ್‌ ಎಂದು ವಾಗ್ದಾಳಿ ನಡೆಸಿದರು.

Tags: