ರಾಜ್ಯ

ಮೀಸಲಾತಿ ಕುರಿತು ರಾಹುಲ್‌ ಗಾಂಧಿ ಹೇಳಿಕೆ ಖಂಡಿಸಿ ನಾಳೆ ಬಿಜೆಪಿ ಪ್ರತಿಭಟನೆ

ಮೈಸೂರು: ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅಮೆರಿಕದಲ್ಲಿ ಮೀಸಲಾತಿ ರದ್ದುಪಡಿಸುವುದಾಗಿ ಹೇಳಿರುವ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಸದ್ಯ ಈ ವಿಚಾರವಾಗಿ ಬಿಜೆಪಿ ನಾಯಕರು ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೀಸಲಾತಿ ಹೇಳಿಕೆಯನ್ನು ಖಂಡಿಸಿ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ ನೀಡಿದೆ.

ಈ ಕುರಿತು ಚಿಕ್ಕಮಗಳೂರಿನಲ್ಲಿ ಬಿಜೆಪಿ ಶಾಸಕ ಸುನೀಲ್‌ ಕುಮರ್‌ ಮಾತನಾಡಿ, ರಾಹುಲ್‌ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿ ನಾಳೆ ಪ್ರತಿಭಟಿಸಲಿದೆ. ರಾಹುಲ್‌ ಈ ಕೂಡಲೇ ದೇಶದ ಜನರ ಕ್ಷಮೆ ಕೇಳಬೇಕು. ರಾಹುಲ್‌ ಅವರ ಮೀಸಲಾತಿ ರದ್ದು ಹೇಳಿಕೆಯಿಂದ ದೇಶದ ಎಸ್‌ಸಿ, ಎಸ್‌ಟಿ ಸಮುದಾಯ ಗಾಬರಿಯಾಗಿದೆ ಎಂದು ರಾಹುಲ್‌ ವಿರುದ್ಧ ವಗ್ದಾಳಿ ನಡೆಸಿದರು.

ವಿಧಾನ ಪರಿಷತ್‌ ಸದಸ್ಯ ಎನ್‌ ರವಿಕುಮಾರ್‌ ಪ್ರತಿಕ್ರಿಯಿಸಿ, ಮಲ್ಲಿಕಾರ್ಜುನ್‌ ಖರ್ಗೆ, ಸಿದ್ದರಾಮಯ್ಯರನ್ನು ಪ್ರಶ್ನೆ ಮಾಡುತ್ತೇನೆ. ಸಂವಿಧಾನ ರಕ್ಷಣೆ ಮಾಡುತ್ತೇವೆ, ಮೀಸಲಾತಿ ಉಳಿಸುತ್ತೇವೆ ಎಂದು ಬೊಬ್ಬೆ ಹೊಡೆಯುವ ನೀವುಗಳು, ಇದಕ್ಕೆ ಏನು ಹೇಳುವಿರಿ. ರಾಹುಲ್‌ ಗಾಂಧಿ ಮೀಸಲಾತಿ ನಿಲ್ಲಿಸುತ್ತೇವೆ ಎಂದು ಹೇಳಿದ್ದಾರೆ. ರಾಹುಲ್‌ ಗಾಂಧಿಗೆ ನಾಚಿಕೆ ಆಗಬೇಕು. ನಾಳೆ ನಾಡಿದ್ದು ರಾಜ್ಯದಲ್ಲಿ ರಾಹುಲ್‌ ಗಾಂಧಿ ಪ್ರತಿಕೃತಿ ದಹನ ಮಾಡುತ್ತೇವೆ. ಅಂಬೇಡ್ಕರ್‌ ಸೋಲಿಸಿದ್ದ ಇದೇ ಕಾಂಗ್ರೆಸ್‌ ಎಂದು ವಾಗ್ದಾಳಿ ನಡೆಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯ ಬಜೆಟ್:‌ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್‌ಅನ್ನು ಮಂಡನೆ ಮಾಡಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ…

20 mins ago

ರಾಜ್ಯ ಬಜೆಟ್: ಎಲ್ಲಾ ಜಿಲ್ಲೆಗಳಲ್ಲಿ ಅಕ್ಕಪಡೆ ಯೋಜನೆ ಜಾರಿಗೆ ನಿರ್ಧಾರ

ಬೆಂಗಳೂರು: ಎಲ್ಲಾ ಜಿಲ್ಲೆಗಳಲ್ಲೂ ಅಕ್ಕಪಡೆ ಯೋಜನೆ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಸಿಎಂ ಸಿದ್ದರಾಮಯ್ಯ…

35 mins ago

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಬಜೆಟ್‌ನಲ್ಲಿ ಅನುಮೋದನೆ ಸಿಕ್ಕಿರುವುದು ಸಂತಸ: ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕ್ಷೇತ್ರದ ಜನರಿಗೆ ಭರವಸೆ ನೀಡಿದಂತೆ…

55 mins ago

ರಾಜ್ಯ ಬಜೆಟ್‌: 5 ಕೆಜಿ ಅಕ್ಕಿ ಬದಲು ಈಗ ಇಂದಿರಾ ಕಿಟ್‌ ಭಾಗ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ದೊಡ್ಡ ಬದಲಾವಣೆ…

1 hour ago

ಉಡುತೊರೆ ಹಳ್ಳ ಏತ ನೀರಾವರಿ ಯೋಜನೆಗೆ 490 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ: ಮಾಜಿ ಶಾಸಕ ಆರ್.‌ನರೇಂದ್ರ ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರದ ಉಡುತೊರೆ ಹಳ್ಳ ಏತ ನೀರಾವರಿ ಯೋಜನೆಯ 490…

1 hour ago

ರಾಜ್ಯ ಬಜೆಟ್‌: ಬೆಂಗಳೂರಿನಲ್ಲಿ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯೆ 17ನೇ ರಾಜ್ಯ ಬಜೆಟ್‌ ಅನ್ನು ಮಂಡನೆ ಮಾಡಿದ್ದಾರೆ. ಸಿಲಿಕಾನ್‌ ಸಿಟಿ ಬೆಂಗಳೂರಿನ ಸಂಚಾರ…

2 hours ago