ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತು ಅನ್ನು ಹಿಂಪಡೆಯುವಂತೆ ಆಗ್ರಹಿಸಿ ಬಿಜೆಪಿ ಪಕ್ಷ ಕೆಂಗಲ್ ಹನುಮಂತಯ್ಯನವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಮ್ಮ ಶಾಸಕರನ್ನು ಅಮಾನತುಗೊಳಿಸಿರುವ ಸ್ಪೀಕರ್ ಅವರ ಸರ್ವಾಧಿಕಾರಿ ಧೋರಣೆ ಖಂಡನೀಯ ಎಂದಿದ್ದಾರೆ.
ಸರ್ವಾಧಿಕಾರಿಯಂತೆ ವರ್ತಿಸಿ ನಮ್ಮ ಪಕ್ಷದ 18 ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ವಿರುದ್ಧ ಮತ್ತು ಅಮಾನತನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಇಂದು(ಏಪ್ರಿಲ್.2) ಪಕ್ಷದ ಶಾಸಕರೊಂದಿಗೆ ವಿಧಾನಸೌಧದ ಎದುರು ಕೆಂಗಲ್ ಹನುಮಂತಯ್ಯನವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರಜಾಪ್ರಭುತ್ವದ ದೇಗುಲದಲ್ಲೇ ಜನಪ್ರತಿನಿಧಿಗಳ ಬಾಯಿ ಮುಚ್ಚಿಸಿ ಹೊರಹಾಕುವ ನಿರ್ಧಾರ ಪ್ರಜಾತಂತ್ರ ವ್ಯವಸ್ಥೆಯ ಮೇಲಿನ ದಬ್ಬಾಳಿಕೆಯ ಕ್ರಮವಾಗಿದೆ ಎಂದು ಹೇಳಿದ್ದಾರೆ.
ತುರ್ತು ಪರಿಸ್ಥಿತಿ ಹೇರಿದ ಕುಖ್ಯಾತಿಯ ಕಾಂಗ್ರೆಸ್ಸಿಗರಿಗೆ ವಿರೋಧ ಪಕ್ಷಗಳ ದನಿ ಅಡಗಿಸುವ ವಿಧಾನ ಕರತಲಾಮಲಕವಾಗಿದೆ. ಸ್ಪೀಕರ್ ಅವರು ಈ ಕೂಡಲೇ ಅಮಾನತ್ತನ್ನು ರದ್ದುಗೊಳಿಸಿ ಶಾಸಕತ್ವವನ್ನು ಮರುಸ್ಥಾಪಿಸಲು ಒತ್ತಾಯಿಸಿ ಜಂಟಿ ಕಾರ್ಯದರ್ಶಿಗಳ ಮೂಲಕ ವಿಧಾನಸಭಾ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು ಎಂದು ತಿಳಿಸಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…