ರಾಜ್ಯ

18 ಶಾಸಕರ ಅಮಾನತು ಹಿಂಪಡೆಯುವಂತೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತು ಅನ್ನು ಹಿಂಪಡೆಯುವಂತೆ ಆಗ್ರಹಿಸಿ ಬಿಜೆಪಿ ಪಕ್ಷ ಕೆಂಗಲ್‌ ಹನುಮಂತಯ್ಯನವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಮ್ಮ ಶಾಸಕರನ್ನು ಅಮಾನತುಗೊಳಿಸಿರುವ ಸ್ಪೀಕರ್ ಅವರ ಸರ್ವಾಧಿಕಾರಿ ಧೋರಣೆ ಖಂಡನೀಯ ಎಂದಿದ್ದಾರೆ.

ಸರ್ವಾಧಿಕಾರಿಯಂತೆ ವರ್ತಿಸಿ ನಮ್ಮ ಪಕ್ಷದ 18 ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್‌ ವಿರುದ್ಧ ಮತ್ತು ಅಮಾನತನ್ನು ವಾಪಸ್‌ ಪಡೆಯುವಂತೆ ಆಗ್ರಹಿಸಿ ಇಂದು(ಏಪ್ರಿಲ್‌.2) ಪಕ್ಷದ ಶಾಸಕರೊಂದಿಗೆ ವಿಧಾನಸೌಧದ ಎದುರು ಕೆಂಗಲ್‌ ಹನುಮಂತಯ್ಯನವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರಜಾಪ್ರಭುತ್ವದ ದೇಗುಲದಲ್ಲೇ ಜನಪ್ರತಿನಿಧಿಗಳ ಬಾಯಿ ಮುಚ್ಚಿಸಿ ಹೊರಹಾಕುವ ನಿರ್ಧಾರ ಪ್ರಜಾತಂತ್ರ ವ್ಯವಸ್ಥೆಯ ಮೇಲಿನ ದಬ್ಬಾಳಿಕೆಯ ಕ್ರಮವಾಗಿದೆ ಎಂದು ಹೇಳಿದ್ದಾರೆ.

ತುರ್ತು ಪರಿಸ್ಥಿತಿ ಹೇರಿದ ಕುಖ್ಯಾತಿಯ ಕಾಂಗ್ರೆಸ್ಸಿಗರಿಗೆ ವಿರೋಧ ಪಕ್ಷಗಳ ದನಿ ಅಡಗಿಸುವ ವಿಧಾನ ಕರತಲಾಮಲಕವಾಗಿದೆ. ಸ್ಪೀಕರ್ ಅವರು ಈ ಕೂಡಲೇ ಅಮಾನತ್ತನ್ನು ರದ್ದುಗೊಳಿಸಿ ಶಾಸಕತ್ವವನ್ನು ಮರುಸ್ಥಾಪಿಸಲು ಒತ್ತಾಯಿಸಿ ಜಂಟಿ ಕಾರ್ಯದರ್ಶಿಗಳ ಮೂಲಕ ವಿಧಾನಸಭಾ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

21 mins ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

36 mins ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

1 hour ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

7 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

7 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

7 hours ago