ರಾಜ್ಯ

ನುಂಗಣ್ಣ ಸಿದ್ದರಾಮಯ್ಯ ಜನರನ್ನು ಲೂಟಿ ಮಾಡುತ್ತಿದ್ದಾರೆ: ವಿಪಕ್ಷ ನಾಯಕ ಆರ್‌.ಅಶೋಕ್‌

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನುಂಗಣ್ಣನಂತೆ ಎಲ್ಲವನ್ನೂ ನುಂಗುತ್ತಿದ್ದಾರೆ. ಅದರ ಜೊತೆಗೆ ತೈಲ ದರ ಏರಿಕೆ ಮಾಡಿ ಜನರನ್ನು ಲೂಟಿ ಮಾಡುತ್ತಿದ್ದಾರೆ. ಜನರು ದಂಗೆ ಎದ್ದು ಸರ್ಕಾರವನ್ನು ಕಿತ್ತುಹಾಕಬೇಕಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿಂದು (ಜೂನ್‌.17) ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎರಡು ನಾಲಿಗೆ ಇದೆ. ಬಿಜೆಪಿ ಸರ್ಕಾರ ಪೆಟ್ರೋಲ್‌ ದರ ಏರಿಸಿದ್ದಕ್ಕೆ ಮಾನ ಮರ್ಯಾದೆ ಇದೆಯೇ ಎಂದು ಪ್ರಶ್ನೆ ಮಾಡಿದ್ದರು. ಈಗ ಮೂರು ರೂಪಾಯಿ ಹೆಚ್ಚು ಮಾಡಿದ ಕಾಂಗ್ರೆಸ್‌ ನಾಯಕರಿಗೆ ಮಾನ ಮರ್ಯಾದೆ ಇಲ್ಲ. ಈಗ ಸಿದ್ದರಾಮಯ್ಯ ಎಂದರೆ ನುಂಗಣ್ಣ ಎಂದು ವ್ಯಂಗ್ಯವಾಡಿದರು.

ತೈಲ ಬೆಲೆ ಏರಿಯಾದರೆ ಸಿಮೆಂಟ್‌, ತರಕಾರಿ ಎಲ್ಲ ಬೆಲೆಯೂ ಏರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈಗ ಯಾವ ಬೆಲೆಗಳು ಹೆಚ್ಚಲಿದೆ ಎಂದು ತಿಳಿಸಲಿ. ಗ್ಯಾರಂಟಿ ಯೋಜನೆಗಳೆಂದು ಹೇಳಿ ಎಲ್ಲರಿಗೂ ಒಂದು ಲಕ್ಷ, ಎರಡು ಸಾವಿರ ಕೋಡುತ್ತೇವೆ ಎಂದರು. ರಾಹುಲ್‌ ಗಾಂಧಿ ಇನ್ನೂ ಮುಂದೆ ಹೋಗಿ ಟಕಾಟಕ್‌ ಎಂದು ಹಾಕುತ್ತೇನೆ ಎಂದರು. ಆದರೆ ಟಕಾಟಕ್‌ ಎಂದು ಜೇಬಿಗೆ ಕತ್ತರಿ ಹಾಕಿದ್ದಾರೆ ಎಂದರು.

ಬಿಜೆಪಿ ಸರ್ಕಾರ ಬಸ್‌ ಟಿಕೆಟ್‌ ದರ ಏರಿಕೆ ಮಾಡಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದು, ಟಿಕೆಟ್‌ ದರ ಶೇ.12 ರಷ್ಟು ಹೆಚ್ಚಿಸಲು ಚರ್ಚೆಯಾಗಿದೆ. ಕಾಫಿ ಟೀ ದರ ಕೂಡ ಹೆಚ್ಚಲಿದೆ. ಕಾಂಗ್ರೆಸ್‌ ಸತ್ತರೆ ತಿಥಿಗೆ ಮಾಡುವ ಉದ್ದಿನ ವಡೆಯ ಬೆಲೆ ಕೂಡ ಹೆಚ್ಚಾಗಲಿದೆ ಎಂದರು.

ಗ್ಯಾರಂಟಿಗೆ 55,000 ಕೋಟಿ ರೂ. ಮೀಸಲಿಟ್ಟಿದ್ದೇವೆ ಎಂದಿದ್ದರು. ಬಳಿಕ ನಮ್ಮದೇ ಹಣವನ್ನು ದರೋಡೆ ಮಾಡಿ ನಮಗೆ ಮರಳಿ ನೀಡುತ್ತಿದ್ದಾರೆ. ಈಗ ಚುನಾವಣೆ ನಡೆದರೆ ಕಾಂಗ್ರೆಸ್‌ ಠೇವಣಿ ಕಳೆದುಕೊಳ್ಳಲಿದೆ. ಲೋಕಸಭಾ ಚುನಾವಣೆಯಲ್ಲಿ 143 ಕ್ಷೇತ್ರ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲೂ ಹೆಚ್ಚು ಮತಗಳು ಬಿಜೆಪಿಗೆ ಬಂದಿದೆ ಎಂದರು.

ದಲಿತರ ಹಣ ನುಂಗಿದ ಸಿಎಂ: ದಲಿತರ 187 ಕೋಟಿ ರೂಪಾಯಿ ನುಂಗಿ ಸಚಿವ ಬಿ.ನಾಗೇಂದ್ರ ಔಟ್‌ ಆಗಿದ್ದಾರೆ. ಇನ್ನು ಎರಡನೇ ವಿಕೆಟ್‌ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿದೆ. ಸಚಿವ ನಾಗೇಂದ್ರ 20 ಪರ್ಸೆಂಟ್‌ ಜೇನು ಕಿತ್ತಿದ್ದು ಮಾತ್ರ, ಆದರೆ 80 ಪರ್ಸೆಂಟ್‌ ಜೇನನ್ನು ಸಿಎಂ ಸಿದ್ದರಾಮಯ್ಯ ಹೊಡೆದಿದ್ದಾರೆ. ಈ ಹಣ ತೆಲಂಗಾಣಕ್ಕೆ ಹೋಗಿ, ಬಳಿಕ ಬಾರ್‌ಗಳಿಗೆ ಹೋಗಿದೆ. ದಲಿತರ ಉದ್ಯಮಗಳಿಗೆ, ಅಂಗಡಿಗಳಿಗೆ, ಅವರ ಮಕ್ಕಳ ಸ್ಕಾಲರ್‌ಶಿಪ್‌ಗೆ ಈ ಹಣ ಕೊಡಬೇಕಿತ್ತು. ಚೆಕ್‌ನಲ್ಲೇ ಹಗಲು ದರೋಡೆ ಮಾಡಿದ್ದಾರೆ. ಇದರಿಂದಾಗಿ ನಿಷ್ಠಾವಂತ ಅಧಿಕಾರಿ ಸತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಬಂಡವಾಳ ಬಯಲು ಮಾಡುತ್ತೇವೆ: ಕಾಂಗ್ರೆಸ್‌ ಸರ್ಕಾರದ ದುರಾಡಳಿತದ ವಿರುದ್ಧ ಹಾಗೂ ಸರ್ಕಾರದ ಬಂಡವಾಳ ಬಯಲು ಮಾಡಲು ಬಿಜೆಪಿ ಇನ್ನಷ್ಟು ಹೋರಾಟ ಮಾಡಲಿದೆ. ಸಿಎಂ ಸಿದ್ದರಾಮಯ್ಯ ರಾಜ್ಯದ ಆರ್ಥಿಕತೆಯನ್ನು ದಿವಾಳಿಯಾಗಿಸಿದ್ದಾರೆ. ಸಾಲ ಪಡೆಯಲು ಬಿಬಿಎಂಪಿ ಕಚೇರಿಗಳನ್ನು ಅಡಮಾನ ಇಡಲು ಮುಂದಾಗಿದ್ದಾರೆ. ಹೀಗೆಯೇ ಬಿಟ್ಟರೆ ವಿಧಾನಸೌಧವನ್ನೂ ಅಡ ಇಡುತ್ತಾರೆ. ಎಲ್ಲರೂ ದಂಗೆ ಎದ್ದು ಈ ಸರ್ಕಾರವನ್ನು ಕಿತ್ತು ಹಾಕಬೇಕಿದೆ ಎಂದು ಕರೆ ನೀಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago