ಬೆಂಗಳೂರು: ವಿಧಾನಸಭೆಯಲ್ಲಿ ಸದನ ನಡೆಯುತ್ತಿರುವಾಗಲೇ ಹನಿಟ್ರ್ಯಾಪ್ ಬಾಂಬ್ ಸಿಡಿಸಿದ ಕಾಂಗ್ರೆಸ್ ಸಚಿವರು ಈಗ ಥಂಡಾ ಹೊಡೆದಿದ್ದಾರೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸದನ ನಡೆಯುತ್ತಿರುವಾಗಲೇ ಹನಿಟ್ರ್ಯಾಪ್ ಬಾಂಬ್ ಸಿಡಿಸಿದ ಕಾಂಗ್ರೆಸ್ ಸರ್ಕಾರದ ಸಚಿವರು ಈಗ ಥಂಡಾ ಹೊಡೆದಿದ್ದಾರೆ. ಮಾನವನ್ನು ಪಣಕ್ಕಿಟ್ಟಾದರೂ ರಾಜಕೀಯದಲ್ಲಿ ಉಸಿರಾಡಬೇಕೆಂದು ನಿರ್ಧರಿಸಿರುವ ಕಾಂಗ್ರೆಸ್ಸಿಗರಿಗೆ ಕಾಂಗ್ರೆಸ್ಸಿಗರೇ ಸರಿಸಾಟಿ ಎಂದು ಟೀಕಿಸಿದೆ.
ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಬಗ್ಗು ಬಡಿಯಲು ಸಿಎಂ ಸಿದ್ದರಾಮಯ್ಯ ಬಣ ಹನಿಟ್ರ್ಯಾಪ್ ದಾಳ ಉರುಳಿಸಿದೆ. ಆ ಮೂಲಕ ಮಾನ ಹೋದರೂ ಪರವಾಗಿಲ್ಲ ಸಿಎಂ ಕುರ್ಚಿ ಬಿಡೆವು ಎಂಬ ಸ್ಪಷ್ಟ ಸಂದೇಶವನ್ನು ಸಿದ್ದರಾಮಯ್ಯ ಬಣ ರವಾನಿಸಿದೆ. ಕಾಂಗ್ರೆಸ್ ಪಕ್ಷದೊಳಗಿನ ಕುರ್ಚಿ ಕಿತ್ತಾಟದ ಮುಂದುವರಿದ ಭಾಗವೇ ಹನಿಟ್ರ್ಯಾಪ್ ಪ್ರಕರಣ ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ ಎಂದು ವಾಗ್ದಾಳಿ ನಡೆಸಿದೆ.
ರಾಜ್ಯ ನಿಸ್ತೇಜವಾಗಿದೆ, ಅಭಿವೃದ್ಧಿ ನಿಂತು ಹೋಗಿದೆ, ಗ್ಯಾರಂಟಿಗಳು ಕುಂಟುತ್ತಾ ಸಾಗುತ್ತಿದೆ, ಬರಗಾಲ ಆವರಿಸುತ್ತದೆ ಸರ್ಕಾರ ಮಾತ್ರ ಸಿಡಿ ಬಿಡುಗಡೆ ಕಾರ್ಯಕ್ರಮವನ್ನೇ ರಾಷ್ಟ್ರೀಯ ಯೋಜನೆ ಎಂಬ ರೀತಿಯಲ್ಲಿ ಪರಿಗಣಿಸಿರುವುದು ವಿಪರ್ಯಾಸ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…
ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…
ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…
ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…