Mysore
22
light rain

Social Media

ಗುರುವಾರ, 08 ಅಕ್ಟೋಬರ್ 2026
Light
Dark

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲೂ ಅತಿ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲುತ್ತೇವೆ. ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಆದ್ದರಿಂದ ಕಾಂಗ್ರೆಸ್‌ ನಾಯಕರಿಗೆ ಪಾಠ ಕಲಿಸಲು ಬಿಜೆಪಿಗೆ ಮತ ಹಾಕಿ ಎಂದು ಮನವಿ ಮಾಡಿದರು.

ಇನ್ನು ಪ್ರಚಾರಕ್ಕೆ ಯಾರೇ ಬಂದರೂ ಪಕ್ಷದಲ್ಲಿ ಅವಕಾಶವಿದೆ. ಯತ್ನಾಳ್‌ ಪ್ರಚಾರಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಹೇಳಿದರು.

Tags:
error: Content is protected !!