Mysore
26
overcast clouds

Social Media

ಶುಕ್ರವಾರ, 09 ಜನವರಿ 2026
Light
Dark

ಡಿಕೆ ಸುರೇಶ್‌ಗೆ ಮತ ಹಾಕಲು ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಡಿಕೆಶಿ ಧಮ್ಕಿ: ಬಿಜೆಪಿ ಆಕ್ರೋಶ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಡಿಕೆ ಸುರೇಶ್ ಅವರ ಪರ ಮತ ಕೇಳುತ್ತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಧಮ್ಕಿ ಹಾಕಿ ಆಮಿಷ ಒಡ್ಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಮತಯಾಚನೆ ವೇಳೆ ಅಲ್ಲಿನ ನಿವಾಸಿಗಳಿಗೆ ಬ್ಲ್ಯಾಕ್​ಮೇಲ್ ಮಾಡಿರುವ​​ ವಿಡಿಯೋ ಸದ್ಯ ವೈರಲ್​ ಆಗಿದೆ. ರಾಜ್ಯ ಬಿಜೆಪಿ ಘಟಕ ಈ ವಿಡಿಯೋವನ್ನು ಟ್ವೀಟ್​ ಮಾಡಿ, ಆಕ್ರೋಶ ಹೊರ ಹಾಕಿದೆ.

ಡಿಕೆ ಶಿವಕುಮಾರ್ ವಿಡಿಯೋದಲ್ಲಿ ಹೇಳಿದ್ದೇನು?

“ನಿಮಗೆ ನಾನೊಂದು ಪ್ರಾಮಾಣಿಕ ಪ್ರಶ್ನೆ ಕೇಳುತ್ತೇನೆ. ನಾನು ಇಲ್ಲಿಗೆ ವ್ಯವಹಾರಕ್ಕಾಗಿ ಬಂದಿದ್ದೇನೆ. ಈ ಅಪಾರ್ಟ್ಮೆಂಟ್​​ನಲ್ಲಿ 2510 ಮನೆಗಳಿವೆ. 6424 ಮತಗಳಿವೆ. ನಿಮ್ಮ ಎರಡು ಸಮಸ್ಯೆಗಳೆಂದರೆ ಒಂದು, ನಿಮ್ಮ ಹಕ್ಕುಪತ್ರ ನಿಮಗೆ ಹಸ್ತಾಂತರವಾಗದಿರುವುದು. ಎರಡನೆಯದ್ದು ಕಾವೇರಿ ನೀರು. ಒಂದು ವೇಳೆ ಈ ಎರಡನ್ನೂ ನಾನು ನಿಮಗೆ ನೀಡಿದರೆ ನೀವು ನನಗೆ ಏನು ಕೊಡುತ್ತೀರಿ? ನಿಮ್ಮ ಬೂತ್​ ಆರ್​ಆರ್​ ನಗರದಲ್ಲಿದೆ. 2-3 ಬೂತ್​ನಲ್ಲಿ ನಮ್ಮ ಪರವಾದ ಮತಗಳಿವೆ. ಪ್ರಶ್ನಾರ್ಥಕವಾಗಿ ಉಳಿದಿರುವುದು ನಿಮ್ಮ ಬೂತ್​ ಮಾತ್ರ. ಈಗ ಹೇಳಿ ಏನು ಮಾಡುತ್ತೀರ? ನಾನು ಉಪಮುಖ್ಯಮಂತ್ರಿಯಾಗಿದ್ದೇನೆ, ಬಿಡಿಎ ಸಚಿವ, ಬೆಂಗಳೂರು ನಗರಾಭಿವೃದ್ಧಿ ಸಚಿವ ಮತ್ತು ಬೆಂಗಳೂರು ಜಲಮಂಡಳಿ ಸಚಿವನಿದ್ದೇನೆ. ಈ ಎಲ್ಲವೂ ನಿಮ್ಮ ಪಾಕೆಟ್​ನಲ್ಲಿವೆ. ಏನೆ ಸಮಸ್ಯೆಯಿದ್ದರೂ ನೀವು ಮುಖ್ಯಮಂತ್ರಿಗಳ ಮನೆಗೆ ಹೋಗಬೇಕಿಲ್ಲ. ನನ್ನ ಮನೆಗೆ ಬನ್ನಿ. ನಾನು ನಿಮಗೆ ಸಹಾಯ ಮಾಡುತ್ತೇನೆ. ನಾನು ನಿಮ್ಮ ಕೈಯಲ್ಲಿದ್ದೇನೆ. ಈಗ ಹೇಳಿ ನನಗೆ ನೀವು ಹೇಗೆ ಸಹಾಯ ಮಾಡುತ್ತೀರಾ? ನಮಗೆ ಭರವಸೆ ನೀಡಿ, ನನಗೆ ಮತ ಹಾಕಿ. ನಾನು ನಿಮಗೆ ಭರವಸೆ ನೀಡುತ್ತೇನೆ 2-3 ತಿಂಗಳಲ್ಲಿ ನಿಮ್ಮ ಈ ಎರಡು ಬೇಡಿಕೆಗಳನ್ನು ಈಡೇರಿಸುತ್ತೇನೆ. ಇದು ನನ್ನ ತಮ್ಮನ ಲೋಕಸಭಾ ಕ್ಷೇತ್ರ, ಅಂದರೆ ನನ್ನ ಕ್ಷೇತ್ರ ಇದ್ದ ಹಾಗೆ” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಪರೋಕ್ಷವಾಗಿ ಬ್ಯ್ಲಾಕ್​ಮೇಲ್​ ಮಾಡಿರುವ ವಿಡಿಯೋವನ್ನು ರಾಜ್ಯ ಬಿಜೆಪಿ ಘಟಕ ಟ್ವೀಟ್​ ಮಾಡಿದೆ.

Tags:
error: Content is protected !!