ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ.
ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ. ಇದೇ ವೇಳೆ ವಿಪಕ್ಷ ಬಿಜೆಪಿ ಕೂಡ ರೈತರೊಂದಿಗೆ ಹೋರಾಟಕ್ಕೆ ಸಜ್ಜಾಗಿದ್ದು, ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದೆ.
ಇದನ್ನು ಓದಿ: ಶಾಲಾ ಬಸ್ ತಡೆದು ಬಾಲಕಿಯನ್ನು ವಶಕ್ಕೆ ನೀಡುವಂತೆ ಕಿರಿಕ್: ಪುಂಡರಿಬ್ಬರ ಬಂಧನ
ಈ ಸಂಬಂಧ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಚಳಿಗಾಲದ ಅಧಿವೇಶನ ಆರಂಭವಾಗಿದೆ. ರೈತರಿಗೆ ಮೋಸ ಮಾಡುತ್ತಿರುವುದು ಕೇಂದ್ರ ಸರ್ಕಾರ. ರೈತರ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಕೇಂದ್ರ ಸರ್ಕಾರ ಪರಿಹಾರ ನೀಡುತ್ತಿಲ್ಲ. ಕೇಂದ್ರ ಸರ್ಕಾರ ರೈತರ ಬೆಳೆಗಳನ್ನು ಖರೀದಿ ಮಾಡುತ್ತಿಲ್ಲ. ಖರೀದಿ ಮಾಡಲು ಬಿಜೆಪಿ ನಾಯಕರು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡಬೇಕಿರುವ ಬಾಕಿ ಹಣ ಬಿಡುಗಡೆ ಮಾಡಬೇಕು. ರೈತರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಅನುದಾನ ಬಿಡುಗಡೆಗೊಳಿಸಲಿ ಎಂದು ಆಗ್ರಹಿಸಿದರು.
ರೈತರಿಗೆ ಅನ್ಯಾಯ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಯವರು ಹೋರಾಡಲಿ. ನಮ್ಮ ವಿರುದ್ಧ, ರಾಜ್ಯ ಸರ್ಕಾರದ ವಿರುದ್ಧ ಹೋರಾಡುವುದಲ್ಲ ಎಂದು ಗುಡುಗಿದರು.





