ಬೆಂಗಳೂರು: ಮಹಿಳೆಯರನ್ನು ಕಾಲಕಸಕ್ಕಿಂತಲೂ ಕೀಳಾಗಿ ನೋಡುತ್ತಿರುವ ಈ ಮಹಿಳಾ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಮ್ಮ ಜನಾಕ್ರೋಶ ಯಾತ್ರೆ ರಾಜ್ಯಾದ್ಯಂತ ಆರ್ಭಟಿಸಲಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಸರಣಿ ಟ್ವಿಟ್ ಮಾಡಿರುವ ಬಿಜೆಪಿಯೂ, ಮಹಿಳೆಯರಿಗೆ ಶಕ್ತಿ ತುಂಬುತ್ತೇವೆ ಎಂದು ಅಧಿಕಾರಕ್ಕೆ ಬಂದ ಭ್ರಷ್ಟ ಹಾಗೂ ಭಂಡ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ರಕ್ಷಣೆ ನೀಡಿದ್ದಕ್ಕಿಂತಲೂ, ಮಹಿಳೆಯರ ಮಾನಹರಣ ಮಾಡಿದ್ದೆ ಜಾಸ್ತಿ ಎಂದು ಕಿಡಿಕಾರಿದೆ.
ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಮಹಿಳೆಯರಿಗೆ ತಪ್ಪದೆ 2000 ರೂ. ಹಣ ನೀಡುತ್ತೇವೆಂದು ಹೇಳಿ ಈಗ ಪ್ರತಿ ತಿಂಗಳು ನೀಡಲು ಅದು ಸಂಬಳವಾ ಎಂದು ಭಂಡತನದಿಂದ ಮರುಪ್ರಶ್ನೆ ಹಾಕುತ್ತಿದೆ. ಇದು ಕಾಂಗ್ರೆಸ್ ಮಹಿಳೆಯರ ಮೇಲೆ ತೋರುತ್ತಿರುವ ಅಸಲಿ ಕಾಳಜಿ ಹಾಗೂ ಗೌರವ ಎಂದು ವಾಗ್ದಾಳಿ ನಡೆಸಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಮಹಿಳೆಯರಿಗೆ ರಕ್ಷಣೆ ಎಂಬುದು ಮರೀಚಿಕೆಯಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ತವರು ಜಿಲ್ಲೆ ಬೆಳಗಾವಿಯ ವಂಟಮೂರಿಯಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಮಹಿಳೆಯನ್ನು ಸಂಪೂರ್ಣ ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದರು. ಆದರೆ ಆ ಹೀನ ಕೃತ್ಯವೆಸಗಿದ ಆರೋಪಿಗಳನ್ನು ಭ್ರಷ್ಟ ಕಾಂಗ್ರೆಸ್ ಸರ್ಕಾರ ಕೇವಲ ನಾಮಕಾವಸ್ಥೆಗೆ ಬಂಧಿಸಿತೇ ಹೊರತು ನೊಂದ ಮಹಿಳೆ ಮತ್ತವರ ಕುಟುಂಬಕ್ಕೆ ನ್ಯಾಯ ದೊರಕಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಮನುಕುಲವೇ ತಲೆತಗ್ಗಿಸುವಂತಹ ಬೆಳಗಾವಿಯ ಘಟನೆ ಮಾಸುವ ಮುನ್ನವೇ ಹಾನಗಲ್‌ನಲ್ಲಿ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಮತಾಂಧ ಜಿಹಾದಿಗಳಿಂದ ಸಾಮೂಹಿಕ ಅತ್ಯಾಚಾರ ನಡೆಯಿತು. ಆ ಮಹಿಳೆಯ ಮೇಲೆ ಜಿಹಾದಿಗಳು ಹಲ್ಲೆ ಮಾಡುವ ವಿಡಿಯೋ ಸಾಕ್ಷಿ ದೊರೆತರೂ ಮಹಿಳೆಯ ದೂರನ್ನು ಸ್ವೀಕರಿಸಲು ಸಹ ಮಹಿಳಾ ವಿರೋಧಿ ಕಾಂಗ್ರೆಸ್ ಸರ್ಕಾರ ಹಿಂದು ಮುಂದು ನೋಡಿತು ಎಂದು ಲೇವಡಿ ಮಾಡಿದೆ.
ಉಡುಪಿಯಲ್ಲಿ ಹಿಂದೂ ಹೆಣ್ಣು ಮಕ್ಕಳು ಶೌಚಾಲಯಕ್ಕೆ ತೆರಳಿದಾಗ, ಅಲ್ಲಿ ಜಿಹಾದಿಗಳು ಕ್ಯಾಮೆರಾ ಇಟ್ಟು ರಹಸ್ಯ ವಿಡಿಯೋ ಸೆರೆಹಿಡಿದಿದ್ದು ಆಕಸ್ಮಿಕ ಗೃಹ ಸಚಿವ ಜಿ.ಪರಮೇಶ್ವರ್ ಅವರ ದೃಷ್ಟಿಯಲ್ಲಿ ಮಕ್ಕಳಾಟ. ಅಲ್ಲದೇ ಬೆಂಗಳೂರಿನ ನಡುರಸ್ತೆಗಳಲ್ಲಿ ದುರುಳರು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದರೆ ಅದು ಮಾಮೂಲಿ ಎಂದು ತೇಪೆ ಹಚ್ಚುತ್ತಾರೆ ಗೃಹ ಸಚಿವರು. ಒಟ್ಟಿನಲ್ಲಿ ಮಹಿಳೆಯರಿಗೆ ಕರ್ನಾಟಕ ಸುರಕ್ಷಿತವಲ್ಲ ಎಂಬುದನ್ನು ಮಹಿಳಾ ವಿರೋಧಿ ಕಾಂಗ್ರೆಸ್ ಸರ್ಕಾರ ಸಾಬೀತುಪಡಿಸುತ್ತಿದೆ ಎಂದು ವಾಗ್ದಾಳಿ ನಡೆಸಿದೆ.
ಪ್ರಣಾಳಿಕೆಯಲ್ಲಿ ಅಂಗನವಾಡಿ, ಆಶಾ, ಅಕ್ಷರ ದಾಸೋಹ ಕಾರ್ಯಕರ್ತೆಯರಿಗೆ ಸಂಬಳ ಹೆಚ್ಚಿಸುತ್ತೇವೆಂದು ಹೇಳಿದ್ದಷ್ಟೇ. ಆದರೆ ಇದುವರೆಗೂ ಪ್ರಣಾಳಿಕೆಯಲ್ಲಿ ಘೋಷಣೆಯಾಗಿದ್ದ ಯೋಜನೆಗಳು ಕಾರ್ಯರೂಪಕ್ಕೆ ಬಂದಿಲ್ಲ ಎಂದು ತಿಳಿಸಿದೆ.
ಕಾಡಿನಲ್ಲಿದ್ದ ನಕ್ಸಲರು ಶರಣಾಗುತ್ತಾರೆ ಎಂದ ತತಕ್ಷಣ ಅವರನ್ನು ದೂರದ ಮೂಡಿಗೆರೆಯಿಂದ ಜೀರೋ ಟ್ರಾಫಿಕ್‌ನಲ್ಲಿ ಗೃಹ ಕಚೇರಿ ಕೃಷ್ಣಾಗೆ ಕರೆಸಿಕೊಂಡ ಸಿಎಂ ಸಿದ್ದರಾಮಯ್ಯ ಅವರಿಗೆ, ವಿಧಾನಸೌಧದ ಕೂಗಳತೆ ದೂರದಲ್ಲಿ ಹಗಲಿರುಳು ಪ್ರತಿಭಟಿಸುತ್ತಿದ್ದ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಕೂಗು ಮಾತ್ರ ಕೇಳಿಸಲೇ ಇಲ್ಲ ಎಂದು ಕಿಡಿಕಾರಿದೆ.
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…