ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಮಹಿಳೆಯರನ್ನು ಕಾಲಕಸಕ್ಕಿಂತಲೂ ಕೀಳಾಗಿ ನೋಡುತ್ತಿರುವ ಈ ಮಹಿಳಾ ವಿರೋಧಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ನಮ್ಮ ಜನಾಕ್ರೋಶ ಯಾತ್ರೆ ರಾಜ್ಯಾದ್ಯಂತ ಆರ್ಭಟಿಸಲಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಸರಣಿ ಟ್ವಿಟ್‌ ಮಾಡಿರುವ ಬಿಜೆಪಿಯೂ, ಮಹಿಳೆಯರಿಗೆ ಶಕ್ತಿ ತುಂಬುತ್ತೇವೆ ಎಂದು ಅಧಿಕಾರಕ್ಕೆ ಬಂದ ಭ್ರಷ್ಟ ಹಾಗೂ ಭಂಡ ಕಾಂಗ್ರೆಸ್‌ ಸರ್ಕಾರ ಮಹಿಳೆಯರಿಗೆ ರಕ್ಷಣೆ ನೀಡಿದ್ದಕ್ಕಿಂತಲೂ, ಮಹಿಳೆಯರ ಮಾನಹರಣ ಮಾಡಿದ್ದೆ ಜಾಸ್ತಿ ಎಂದು ಕಿಡಿಕಾರಿದೆ.

ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಮಹಿಳೆಯರಿಗೆ ತಪ್ಪದೆ 2000 ರೂ. ಹಣ ನೀಡುತ್ತೇವೆಂದು ಹೇಳಿ ಈಗ ಪ್ರತಿ ತಿಂಗಳು ನೀಡಲು ಅದು ಸಂಬಳವಾ ಎಂದು ಭಂಡತನದಿಂದ ಮರುಪ್ರಶ್ನೆ ಹಾಕುತ್ತಿದೆ. ಇದು ಕಾಂಗ್ರೆಸ್‌ ಮಹಿಳೆಯರ ಮೇಲೆ ತೋರುತ್ತಿರುವ ಅಸಲಿ ಕಾಳಜಿ ಹಾಗೂ ಗೌರವ ಎಂದು ವಾಗ್ದಾಳಿ ನಡೆಸಿದೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಮಹಿಳೆಯರಿಗೆ ರಕ್ಷಣೆ ಎಂಬುದು ಮರೀಚಿಕೆಯಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ತವರು ಜಿಲ್ಲೆ ಬೆಳಗಾವಿಯ ವಂಟಮೂರಿಯಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಮಹಿಳೆಯನ್ನು ಸಂಪೂರ್ಣ ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದರು. ಆದರೆ ಆ ಹೀನ ಕೃತ್ಯವೆಸಗಿದ ಆರೋಪಿಗಳನ್ನು ಭ್ರಷ್ಟ ಕಾಂಗ್ರೆಸ್ ಸರ್ಕಾರ‌ ಕೇವಲ ನಾಮಕಾವಸ್ಥೆಗೆ ಬಂಧಿಸಿತೇ ಹೊರತು ನೊಂದ ಮಹಿಳೆ ಮತ್ತವರ ಕುಟುಂಬಕ್ಕೆ ನ್ಯಾಯ ದೊರಕಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಮನುಕುಲವೇ ತಲೆತಗ್ಗಿಸುವಂತಹ ಬೆಳಗಾವಿಯ ಘಟನೆ ಮಾಸುವ ಮುನ್ನವೇ ಹಾನಗಲ್‌ನಲ್ಲಿ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಮತಾಂಧ ಜಿಹಾದಿಗಳಿಂದ ಸಾಮೂಹಿಕ ಅತ್ಯಾಚಾರ ನಡೆಯಿತು. ಆ ಮಹಿಳೆಯ ಮೇಲೆ ಜಿಹಾದಿಗಳು ಹಲ್ಲೆ ಮಾಡುವ ವಿಡಿಯೋ ಸಾಕ್ಷಿ ದೊರೆತರೂ ಮಹಿಳೆಯ ದೂರನ್ನು ಸ್ವೀಕರಿಸಲು ಸಹ ಮಹಿಳಾ ವಿರೋಧಿ ಕಾಂಗ್ರೆಸ್‌ ಸರ್ಕಾರ ಹಿಂದು ಮುಂದು ನೋಡಿತು ಎಂದು ಲೇವಡಿ ಮಾಡಿದೆ.

ಉಡುಪಿಯಲ್ಲಿ ಹಿಂದೂ ಹೆಣ್ಣು ಮಕ್ಕಳು ಶೌಚಾಲಯಕ್ಕೆ ತೆರಳಿದಾಗ, ಅಲ್ಲಿ ಜಿಹಾದಿಗಳು ಕ್ಯಾಮೆರಾ ಇಟ್ಟು ರಹಸ್ಯ ವಿಡಿಯೋ ಸೆರೆಹಿಡಿದಿದ್ದು ಆಕಸ್ಮಿಕ ಗೃಹ ಸಚಿವ ಜಿ.ಪರಮೇಶ್ವರ್‌ ಅವರ ದೃಷ್ಟಿಯಲ್ಲಿ ಮಕ್ಕಳಾಟ. ಅಲ್ಲದೇ ಬೆಂಗಳೂರಿನ ನಡುರಸ್ತೆಗಳಲ್ಲಿ ದುರುಳರು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದರೆ ಅದು ಮಾಮೂಲಿ ಎಂದು ತೇಪೆ ಹಚ್ಚುತ್ತಾರೆ ಗೃಹ ಸಚಿವರು. ಒಟ್ಟಿನಲ್ಲಿ ಮಹಿಳೆಯರಿಗೆ ಕರ್ನಾಟಕ ಸುರಕ್ಷಿತವಲ್ಲ ಎಂಬುದನ್ನು ಮಹಿಳಾ ವಿರೋಧಿ ಕಾಂಗ್ರೆಸ್‌ ಸರ್ಕಾರ ಸಾಬೀತುಪಡಿಸುತ್ತಿದೆ ಎಂದು ವಾಗ್ದಾಳಿ ನಡೆಸಿದೆ.

ಪ್ರಣಾಳಿಕೆಯಲ್ಲಿ ಅಂಗನವಾಡಿ, ಆಶಾ, ಅಕ್ಷರ ದಾಸೋಹ ಕಾರ್ಯಕರ್ತೆಯರಿಗೆ ಸಂಬಳ ಹೆಚ್ಚಿಸುತ್ತೇವೆಂದು ಹೇಳಿದ್ದಷ್ಟೇ. ಆದರೆ ಇದುವರೆಗೂ ಪ್ರಣಾಳಿಕೆಯಲ್ಲಿ ಘೋಷಣೆಯಾಗಿದ್ದ ಯೋಜನೆಗಳು ಕಾರ್ಯರೂಪಕ್ಕೆ ಬಂದಿಲ್ಲ ಎಂದು ತಿಳಿಸಿದೆ.

ಕಾಡಿನಲ್ಲಿದ್ದ ನಕ್ಸಲರು ಶರಣಾಗುತ್ತಾರೆ ಎಂದ ತತಕ್ಷಣ ಅವರನ್ನು ದೂರದ ಮೂಡಿಗೆರೆಯಿಂದ ಜೀರೋ ಟ್ರಾಫಿಕ್‌ನಲ್ಲಿ ಗೃಹ ಕಚೇರಿ ಕೃಷ್ಣಾಗೆ ಕರೆಸಿಕೊಂಡ ಸಿಎಂ ಸಿದ್ದರಾಮಯ್ಯ ಅವರಿಗೆ, ವಿಧಾನಸೌಧದ ಕೂಗಳತೆ ದೂರದಲ್ಲಿ ಹಗಲಿರುಳು ಪ್ರತಿಭಟಿಸುತ್ತಿದ್ದ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಕೂಗು ಮಾತ್ರ ಕೇಳಿಸಲೇ ಇಲ್ಲ ಎಂದು ಕಿಡಿಕಾರಿದೆ.

ಅರ್ಚನ ಎಸ್‌ ಎಸ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

2 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

8 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

8 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

9 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

10 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

16 hours ago