ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆತ್ಮಹತ್ಯೆ ಭಾಗ್ಯ ಜಾರಿಗೊಳಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸರಣಿ ಆತ್ಮಹತ್ಯೆ ಪ್ರಕರಣಗಳು ದಾಖಲಾಗುತ್ತಿದೆ ಎಂದು ಕಿಡಿಕಾರಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ ಗುತ್ತಿಗೆದಾರ ಸಚಿನ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕ್ಲೀನ್ ಚಿಟ್ ನೀಡಿರುವುದು ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಎಂಬಂತಾಗಿದೆ ಎಂದು ವಾಗ್ದಾಳಿ ನಡೆಸಿದೆ.
ಸಚಿನ್ ಅವರ ಡೆತ್ ನೋಟ್‌ನಲ್ಲಿ ಸ್ಪಷ್ಟವಾಗಿ ಪ್ರಿಯಾಂಕ್ ಖರ್ಗೆಯವರ ಆಪ್ತರ ಹೆಸರು ಉಲ್ಲೇಖಗೊಂಡಿದೆ. ಸಚಿವರ ಆಪ್ತರು ಸಚಿವರ ಪ್ರಭಾವ, ರಕ್ಷಣೆ ಇಲ್ಲದೆ ಕೋಟಿ ಕೋಟಿ ಡಿಮ್ಯಾಂಡ್ ಮಾಡಲು ಸಾಧ್ಯವೇ ಇಲ್ಲ. ಹೀಗಿರುವಾಗ ಸ್ವತಃ ಉಪ ಮುಖ್ಯಮಂತ್ರಿಗಳೇ ಆರೋಪಿತರ ಪರವಾಗಿ ನಿಂತಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದೆ.
ಸಿಎಂ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಮುಖ್ಯಮಂತ್ರಿ ಪಟ್ಟ ಏರಲೇಬೇಕೆಂಬ ಹಠದಲ್ಲಿರುವ ಡಿಕೆಶಿ, ಅದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ಪರವಾಗಿ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಬಹುದು ಎನ್ನುವುದಕ್ಕೆ ಡಿಕೆಶಿ ಉದಾಹರಣೆಯಾಗಿದ್ದಾರೆ ಎಂದು ವ್ಯಂಗ್ಯವಾಡಿದೆ.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕಾಂಗ್ರೆಸ್ ಸರ್ಕಾರದ ಪ್ರಾಯೋಜಿತ ಹತ್ಯೆ. ಸಚಿನ್ ಎಂಬಾತ ತನ್ನ ಸಾವಿಗೆ ಕಾರಣರಾದವರ ಹೆಸರನ್ನು ಬರೆದಿಟ್ಟರೂ, ಪ್ರಿಯಾಂಕ್ ಖರ್ಗೆ ಅವರ ಆಪ್ತ, ಕೊಲೆಗಾರ ರಾಜು ಕಪನೂರನ್ನು ಬಂಧಿಸದಿರುವುದು ಈ ಕೊಲೆಯಲ್ಲಿ ಕಾಂಗ್ರೆಸ್ ಸರ್ಕಾರ ಭಾಗಿಯಾಗಿದೆ ಎಂಬುದಕ್ಕೆ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಸಿಎಂ ಸಿದ್ದರಾಮಯ್ಯ ಅವರೇ, ಕೊಲೆಗಡುಕ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಿ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಕಾರಣರಾದ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ಆಗ್ರಹಿಸಿ ಗುತ್ತಿಗೆದಾರ ಸಚಿನ್ ಅವರ ಸಾವಿಗೆ ನ್ಯಾಯ ಸಿಗುವವರೆಗೆ ರಾಜ್ಯಾದ್ಯಂತ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದೆ.
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್‌ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು,…
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…