ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಕೈಬಿಡುವ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ನಾಯಕರು ಕಿಡಿಕಾರಿದ್ದು, ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯದೇ ಹೋದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಒತ್ತಾಯಿಸಿದ್ದಾರೆ.
2022ರ ಏಪ್ರಿಲ್‌ನಲ್ಲಿ ನಡೆದ ಗಲಭೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸರು ಸುಮಾರು 150 ಜನರನ್ನು ಬಂಧಿಸಿದ್ದರು. ಅಲ್ಲದೇ, ಆ ಆರೋಪಿಗಳ ಪೈಕಿಯಲ್ಲಿ ಕೆಲವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಪ್ರಕರಣ ಎದುರಿಸುತ್ತಿರುವ ಅಧಿಕ ಆರೋಪಿಗಳು ಜಾಮೀನಿನ ಮೇಲೆ ಹೊರಗಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರ ಗಲಭೆಯಲ್ಲಿ ಭಾಗಿಯಾದವರ ವಿರುದ್ಧದ ಕೇಸ್ ಸೇರಿದಂತೆ ಒಟ್ಟು 60 ಪ್ರಕರಣಗಳನ್ನು ಹಿಂಪಡೆಯಲು ಚಿಂತನೆ ನಡೆಸಿದೆ. ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಬಿಜೆಪಿ ನಾಯಕರು ಓಲೈಕೆ ರಾಜಕಾರಣದ ಪರಮಾವಧಿ ಎಂದು ಕಿಡಿಕಾರಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಈಗಾಗಲೇ ಹುಬ್ಬಳ್ಳಿ ಗಲಭೆ ಪ್ರಕರಣದ ಬಗ್ಗೆ ಎನ್‌ಐಎ ತನಿಖೆ ನಡೆಸುತ್ತಿದೆ. ಈ ಮಧ್ಯೆ ಸರ್ಕಾರ ಅದನ್ನು ಕೈಬಿಡುವುದು ಸರಿಯೆಂಬಂತೆ ಕಾಣುತ್ತಿಲ್ಲ. ಅಲ್ಲದೇ, ರಾಜ್ಯ ಸಚಿವ ಸಂಪುಟದ ನಿರ್ಧಾರ ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆಯ ಧೋರಣೆಯನ್ನು ತೋರಿಸುತ್ತದೆ. ಈ ಘಟನೆಗಳು ಭಯೋತ್ಪಾದನಾ ಕೃತ್ಯಗಳಿಗಿಂತ ಕಡಿಮೆ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಈ ನಿರ್ಧಾರದಿಂದ ಪೊಲೀಸರು ಹಾಗೂ ನ್ಯಾಯಾಂಗ ಪ್ರಕರಣಗಳ ಅಭಿಪ್ರಾಯಗಳಿಗೆ ವಿರುದ್ಧವಾದಂತಾಗಿದೆ ಎಂದು ಆರೋಪಿಸಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…