ರಾಜ್ಯ

ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡುವ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಕಿಡಿ

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಕೈಬಿಡುವ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ನಾಯಕರು ಕಿಡಿಕಾರಿದ್ದು, ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯದೇ ಹೋದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಒತ್ತಾಯಿಸಿದ್ದಾರೆ.

2022ರ ಏಪ್ರಿಲ್‌ನಲ್ಲಿ ನಡೆದ ಗಲಭೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸರು ಸುಮಾರು 150 ಜನರನ್ನು ಬಂಧಿಸಿದ್ದರು. ಅಲ್ಲದೇ, ಆ ಆರೋಪಿಗಳ ಪೈಕಿಯಲ್ಲಿ ಕೆಲವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಪ್ರಕರಣ ಎದುರಿಸುತ್ತಿರುವ ಅಧಿಕ ಆರೋಪಿಗಳು ಜಾಮೀನಿನ ಮೇಲೆ ಹೊರಗಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರ ಗಲಭೆಯಲ್ಲಿ ಭಾಗಿಯಾದವರ ವಿರುದ್ಧದ ಕೇಸ್‌ ಸೇರಿದಂತೆ ಒಟ್ಟು 60 ಪ್ರಕರಣಗಳನ್ನು ಹಿಂಪಡೆಯಲು ಚಿಂತನೆ ನಡೆಸಿದೆ. ಕಾಂಗ್ರೆಸ್‌ ಪಕ್ಷದ ನಿರ್ಧಾರವನ್ನು ಬಿಜೆಪಿ ನಾಯಕರು ಓಲೈಕೆ ರಾಜಕಾರಣದ ಪರಮಾವಧಿ ಎಂದು ಕಿಡಿಕಾರಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು, ಈಗಾಗಲೇ ಹುಬ್ಬಳ್ಳಿ ಗಲಭೆ ಪ್ರಕರಣದ ಬಗ್ಗೆ ಎನ್‌ಐಎ ತನಿಖೆ ನಡೆಸುತ್ತಿದೆ. ಈ ಮಧ್ಯೆ ಸರ್ಕಾರ ಅದನ್ನು ಕೈಬಿಡುವುದು ಸರಿಯೆಂಬಂತೆ ಕಾಣುತ್ತಿಲ್ಲ. ಅಲ್ಲದೇ, ರಾಜ್ಯ ಸಚಿವ ಸಂಪುಟದ ನಿರ್ಧಾರ ಕಾಂಗ್ರೆಸ್‌ ಸರ್ಕಾರದ ದಬ್ಬಾಳಿಕೆಯ ಧೋರಣೆಯನ್ನು ತೋರಿಸುತ್ತದೆ. ಈ ಘಟನೆಗಳು ಭಯೋತ್ಪಾದನಾ ಕೃತ್ಯಗಳಿಗಿಂತ ಕಡಿಮೆ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಈ ನಿರ್ಧಾರದಿಂದ ಪೊಲೀಸರು ಹಾಗೂ ನ್ಯಾಯಾಂಗ ಪ್ರಕರಣಗಳ ಅಭಿಪ್ರಾಯಗಳಿಗೆ ವಿರುದ್ಧವಾದಂತಾಗಿದೆ ಎಂದು ಆರೋಪಿಸಿದರು.

ಆಂದೋಲನ ಡೆಸ್ಕ್

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

5 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

13 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

13 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

13 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

13 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

13 hours ago