ಬೆಂಗಳೂರು: ಸಂಸ್ಕೃತಿ, ಸಂಸ್ಕಾರ, ಸುರಕ್ಷತೆ ಎಂದರೆ ಕರ್ನಾಟಕ ಎಂಬ ಖ್ಯಾತಿ ಪಡೆದಿದ್ದ ನಮ್ಮ ರಾಜ್ಯ ದರೋಡೆಕಾರರು ಹಾಗೂ ಅತ್ಯಾಚಾರಿಗಳ ತಾಣ ಎಂಬ ಕುಖ್ಯಾತಿಗೆ ಒಳಗಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜಧಾನಿ ಬೆಂಗಳೂರಿನಲ್ಲಿ 32 ವರ್ಷದ ವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ವರದಿ ಅತ್ಯಂತ ಹೇಯ ಹಾಗೂ ಅಮಾನವೀಯ ಘಟನೆಯಾಗಿದ್ದು, ಸ್ತ್ರೀ ಕುಲಕ್ಕೆ ರಕ್ಷಣೆ ನೀಡಲು ಸಾಧ್ಯವಾಗದ ಪರಿಸ್ಥಿತಿಗೆ ರಾಜ್ಯದ ಕಾನೂನು ಸುವ್ಯವಸ್ಥೆ ಬಂದು ತಲುಪಿದೆ.
ಕೇವಲ ಕಾಂಗ್ರೆಸ್ ಸರ್ಕಾರದಲ್ಲೀಗ ನಡೆಯುತ್ತಿರುವುದು ಗುಂಪುಗಾರಿಕೆಯ ರಾಜಕಾರಣ ಮಾತ್ರ. ಜನಹಿತ ಹಾಗೂ ಸಮಾಜ ಸುರಕ್ಷತೆಯನ್ನು ಮರೆತಿರುವ ಈ ಸರ್ಕಾರದ ವ್ಯವಸ್ಥೆಯಲ್ಲಿ ನಾಗರಿಕರು ಅಸುರಕ್ಷತೆಯ ವಾತಾವರಣ ಎದುರಿಸುತ್ತಿದ್ದಾರೆ. ಈ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಇದೆಯೇ? ಗೃಹ ಇಲಾಖೆ ಇದೆಯೇ? ಒಂದು ಸರ್ಕಾರ ಈ ರಾಜ್ಯವನ್ನು ಆಳುತ್ತಿದೆಯೇ? ಎಂಬ ಪ್ರಶ್ನೆ ಜನಸಾಮಾನ್ಯರಿಂದ ಕೇಳೀ ಬರುತ್ತಿದೆ.
ಒಂದು ಕಡೆ ಅಭಿವೃದ್ಧಿಯೂ ಇಲ್ಲ. ಮತ್ತೊಂದು ಕಡೆ ಆಡಳಿತ ನಿರ್ವಹಣೆಯಲ್ಲಿಯೂ ಸಂಪೂರ್ಣ ವಿಫಲ. ಕನಿಷ್ಠ ಕಾನೂನು ಸುರಕ್ಷತೆಯನ್ನಾದರೂ ಒದಗಿಸಲಾಗದ ಈ ಸರ್ಕಾರ ಯಾವ ಮುಖ ಹೊತ್ತುಕೊಂಡು ಅಧಿಕಾರದಲ್ಲಿದೆ ಎಂದು ಜನ ಪ್ರಶ್ನೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಅತ್ಯಾಚಾರ ದುರುಳರ ವಿರುದ್ಧ ಕಠಿಣ ಕ್ರಮಕ್ಕೆ ಒಳಪಡಿಸಲಿ ಎಂದು ಆಗ್ರಹಿಸಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…