ರಾಜ್ಯ

ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ: ಬಿ.ವೈ.ವಿಜಯೇಂದ್ರ ಕಿಡಿ

ಬೆಂಗಳೂರು: ಸಂಸ್ಕೃತಿ, ಸಂಸ್ಕಾರ, ಸುರಕ್ಷತೆ ಎಂದರೆ ಕರ್ನಾಟಕ ಎಂಬ ಖ್ಯಾತಿ ಪಡೆದಿದ್ದ ನಮ್ಮ ರಾಜ್ಯ ದರೋಡೆಕಾರರು ಹಾಗೂ ಅತ್ಯಾಚಾರಿಗಳ ತಾಣ ಎಂಬ ಕುಖ್ಯಾತಿಗೆ ಒಳಗಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜಧಾನಿ ಬೆಂಗಳೂರಿನಲ್ಲಿ 32 ವರ್ಷದ ವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ವರದಿ ಅತ್ಯಂತ ಹೇಯ ಹಾಗೂ ಅಮಾನವೀಯ ಘಟನೆಯಾಗಿದ್ದು, ಸ್ತ್ರೀ ಕುಲಕ್ಕೆ ರಕ್ಷಣೆ ನೀಡಲು ಸಾಧ್ಯವಾಗದ ಪರಿಸ್ಥಿತಿಗೆ ರಾಜ್ಯದ ಕಾನೂನು ಸುವ್ಯವಸ್ಥೆ ಬಂದು ತಲುಪಿದೆ.

ಕೇವಲ ಕಾಂಗ್ರೆಸ್‌ ಸರ್ಕಾರದಲ್ಲೀಗ ನಡೆಯುತ್ತಿರುವುದು ಗುಂಪುಗಾರಿಕೆಯ ರಾಜಕಾರಣ ಮಾತ್ರ. ಜನಹಿತ ಹಾಗೂ ಸಮಾಜ ಸುರಕ್ಷತೆಯನ್ನು ಮರೆತಿರುವ ಈ ಸರ್ಕಾರದ ವ್ಯವಸ್ಥೆಯಲ್ಲಿ ನಾಗರಿಕರು ಅಸುರಕ್ಷತೆಯ ವಾತಾವರಣ ಎದುರಿಸುತ್ತಿದ್ದಾರೆ. ಈ ರಾಜ್ಯದಲ್ಲಿ ಪೊಲೀಸ್‌ ವ್ಯವಸ್ಥೆ ಇದೆಯೇ? ಗೃಹ ಇಲಾಖೆ ಇದೆಯೇ? ಒಂದು ಸರ್ಕಾರ ಈ ರಾಜ್ಯವನ್ನು ಆಳುತ್ತಿದೆಯೇ? ಎಂಬ ಪ್ರಶ್ನೆ ಜನಸಾಮಾನ್ಯರಿಂದ ಕೇಳೀ ಬರುತ್ತಿದೆ.

ಒಂದು ಕಡೆ ಅಭಿವೃದ್ಧಿಯೂ ಇಲ್ಲ. ಮತ್ತೊಂದು ಕಡೆ ಆಡಳಿತ ನಿರ್ವಹಣೆಯಲ್ಲಿಯೂ ಸಂಪೂರ್ಣ ವಿಫಲ. ಕನಿಷ್ಠ ಕಾನೂನು ಸುರಕ್ಷತೆಯನ್ನಾದರೂ ಒದಗಿಸಲಾಗದ ಈ ಸರ್ಕಾರ ಯಾವ ಮುಖ ಹೊತ್ತುಕೊಂಡು ಅಧಿಕಾರದಲ್ಲಿದೆ ಎಂದು ಜನ ಪ್ರಶ್ನೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಅತ್ಯಾಚಾರ ದುರುಳರ ವಿರುದ್ಧ ಕಠಿಣ ಕ್ರಮಕ್ಕೆ ಒಳಪಡಿಸಲಿ ಎಂದು ಆಗ್ರಹಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

11 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

12 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago