Mysore
29
scattered clouds

Social Media

ಶನಿವಾರ, 11 ಏಪ್ರಿಲ 2026
Light
Dark

ನಾನು ಸಿಎಂ ಆಗಲು ಸಂಘಟನೆ ಮಾಡುತ್ತಿಲ್ಲ: ಸುಧಾಕರ್‌ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಬಿಜೆಪಿ ಮುಗಿಸಲು ವಿಜಯೇಂದ್ರ ಹೊರಟಿದ್ದಾರೆ. ಅವರು ಇದ್ದರೆ ಬಿಜೆಪಿಗೆ ಭವಿಷ್ಯ ಇಲ್ಲ ಎಂಬ ಸಂಸದ ಡಾ.ಕೆ.ಸುಧಾಕರ್‌ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ಹೊರಹಾಕಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ನನ್ನ ಸ್ವತ್ತೂ ಅಲ್ಲ. ಅವರ ಸ್ವತ್ತೂ ಅಲ್ಲ. ಅವರ ಸ್ವತ್ತೂ ಅಲ್ಲ. ಹಗುರ ಮಾತು ಯಾರಿಗೂ ಶೋಭೆ ತರಲ್ಲ ಎಂದು ಗುಡುಗಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ನನ್ನ ಹಸ್ತಕ್ಷೇಪವಿಲ್ಲ. ಮುಂದಿನ ಬಾರಿ ಸಿಎಂ ಆಗಲು ನಾನು ಸಂಘಟನೆ ಮಾಡುತ್ತಿಲ್ಲ. ಹಗುರವಾಗಿ ಮಾತನಾಡುವುದು ಅವರಿಗೆ ಶೋಭೆ ತರಲ್ಲ. ಹಗುರವಾಗಿ ಮಾತನಾಡಬಾರದು ಎಂದು ಮನವಿ ಮಾಡುತ್ತೇನೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ನಿನ್ನೆ ಸುಧಾಕರ್‌ ಅವರ ಆಕ್ರೋಶಭರಿತ ಮಾತುಗಳನ್ನು ನೋಡಿದ್ದೇನೆ. ನಮ್ಮನ್ನು ಸಮಾಧಿ ಮಾಡಲು ಹೊರಟಿದ್ದಾರೆ ಎಂದಿದ್ದಾರೆ. ಈ ರೀತಿ ಆಕ್ರೋಶದ ಮಾತು ಸರಿಯಲ್ಲ. ನಾನು ಸುಧಾಕರ್‌ ಭೇಟಿಯಾಗಿ ಮಾತನಾಡುತ್ತೇನೆ. ನನ್ನ ಮೇಲೆ ಸುಧಾಕರ್‌ ಆರೋಪ ಮಾಡೋದು ಸರಿಯಲ್ಲ. ಇದರಿಂದ ಅವರಿಗೂ ಗೌರವ ಸಿಗಲ್ಲ ಪಕ್ಷಕ್ಕೂ ಗೌರವ ಇಲ್ಲ ಎಂದರು.

 

Tags:
error: Content is protected !!